11:44 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ; ಏಕಮುಖ ಸಂಚಾರ ಜಾರಿ

08/07/2026, 20:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಮಡಿಕೇರಿ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆಯ ಬಳಿ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದ ರಸ್ತೆ ಬದಿಯ ಪಾದಚಾರಿ ಮಾರ್ಗ ಕೊಚ್ಚಿಹೋಗಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನಗರಸಭೆಯಿಂದ ಸುಮಾರು ರೂ.35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಪಾದಚಾರಿ ಮಾರ್ಗ ಮಳೆಯ ನೀರಿನ ರಭಸಕ್ಕೆ ಕೊಚ್ಚಿಹೋಗಿರುವುದು ಗಮನಾರ್ಹವಾಗಿದೆ.

ಭೂಕುಸಿತದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ, ಮಡಿಕೇರಿ ನಗರ ಟ್ರಾಫಿಕ್ ಪೊಲೀಸರು ತಕ್ಷಣದಿಂದಲೇ ಏಕಮುಖ (ಒನ್‌ವೇ) ಸಂಚಾರ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಇದರಂತೆ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಹಳೆ ಖಾಸಗಿ ಬಸ್‌ ನಿಲ್ದಾಣದ ಕಡೆಗೆ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ಹಾಗೂ ವಾಹನ ಸವಾರರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪರಿಸ್ಥಿತಿಯನ್ನು ಸಂಬಂಧಪಟ್ಟ ಇಲಾಖೆಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು