ಇತ್ತೀಚಿನ ಸುದ್ದಿ
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು: 2 ಕೋಟಿಯ ತಡೆಗೋಡೆ ಆಯಸ್ಸು ಬರೇ 2 ತಿಂಗಳು!
09/07/2026, 20:07
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಶೃಂಗೇರಿ ಪಟ್ಟಣದ ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು ಕಾಣಿಸಿಕೊಂಡಿದೆ.
2 ತಿಂಗಳ ಹಿಂದೆ ಕಟ್ಟಿದ್ದ ಬೃಹತ್ ಕಾಂಕ್ರೀಟ್ ವಾಲ್ ಢಮಾರ್ ಸ್ಥಿತಿಗೆ ತಲುಪಿದೆ.


2 ಕೋಟಿ ವೆಚ್ಚದ ಕಾಂಕ್ರೀಟ್ ವಾಲ್ ಆಯಸ್ಸು ಕೇವಲ 2 ತಿಂಗಳು ಎಂದು ಜನರು ಆಡಿಕೊಳ್ಳುತ್ತಿದ್ದಾರೆ.
ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಿಸಿದ್ದ ತಡೆಗೋಡೆಯ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಲಾಗಿದೆ.
2 ತಿಂಗಳ ಹಿಂದಷ್ಟೆ ನಿರ್ಮಾಣವಾಗಿದ್ದ ತಡೆಗೋಡೆಗೆಯಲ್ಲಿನ ಬಿರುಕು ಜನರಲ್ಲಿ ಆತಂಕ ಉಂಟು ಮಾಡಿದೆ.
ತಡೆಗೋಡೆ ಕೆಳಭಾಗದ ಮನೆಗಳು, ವ್ಯಾಪಾರಸ್ಥರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ. ಜನರ ತೆರಿಗೆ ಹಣದ ದುರ್ಬಳಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ತಡೆಗೋಡೆ ಕುಸಿದರೆ ಮೇಲ್ಭಾಗದ ದರ್ಗಾಕ್ಕೆ ಅಪಾಯ ಉಂಟಾಗುವ ಸಾಧ್ಯತೆಯಿದೆ.
ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ, ತಾಲೂಕು ಕಚೇರಿ ಕಟ್ಟಡಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.














