4:31 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ: ಇಲ್ಲವಾದಲ್ಲಿ ಕೆಆರ್ ಎಸ್ ಗೆ ಮುತ್ತಿಗೆ: ಸರ್ಕಾರಕ್ಕೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ

10/07/2026, 22:06

ಬೆಂಗಳೂರು(reporterkarnataka.com): ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ತಮಿಳುನಾಡಿಗೆ ಕಾವೇರಿ ನೀರು ಧಾರೆ ಎರೆಯುತ್ತಿರುವ ನಿಮ್ಮ ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದ ನಮ್ಮ ಅನ್ನದಾತರು ನಡುನೀರಿನಲ್ಲಿ ನಿಂತು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶದ ಕಣ್ಣೀರು ಹಾಕುತ್ತಿದ್ದಾರೆ. ರಾಜ್ಯದಲ್ಲಿ ಮಳೆ ಇಲ್ಲದೆ ಕೆರೆಗಳು ಒಣಗುತ್ತಿವೆ, ನಾಲೆಗಳು ಬತ್ತುತ್ತಿವೆ, ರೈತರ ಜಮೀನುಗಳು ಒಣಗಿ ಕರಕಲಾಗುತ್ತಿವೆ. ಇಂತಹ ಭೀಕರ ಪರಿಸ್ಥಿತಿಯಲ್ಲೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ರಾಜಕೀಯ ಲಾಭಕ್ಕಾಗಿ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸುತ್ತಿರುವುದು ರೈತರಿಗೆ ಮಾಡುತ್ತಿರುವ ಮಹಾದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಮ್ಮ ಆಗ್ರಹಗಳನ್ನು ಸ್ಪಷ್ಟವಾಗಿ ಕೇಳಿಸಿಕೊಳ್ಳಿ.

*ಕೂಡಲೇ ಐಸಿಸಿ (ICC) ಸಭೆ ನಡೆಸಿ: ನೀರಾವರಿ ಸಲಹಾ ಸಮಿತಿ ಸಭೆಯನ್ನು ತಕ್ಷಣವೇ ಕರೆದು, ನಮ್ಮ ರಾಜ್ಯದ ಜಲಾಶಯಗಳ ನೈಜ ಸ್ಥಿತಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಬೇಕು. *ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ: ಕದ್ದುಮುಚ್ಚಿ ನೆರೆ ರಾಜ್ಯಕ್ಕೆ ನೀರು ಹರಿಸುವ ನಿಮ್ಮ ರಹಸ್ಯ ಒಪ್ಪಂದವನ್ನು ತಕ್ಷಣವೇ ಕೈಬಿಟ್ಟು, ಕಾವೇರಿ ಗೇಟ್‌ಗಳನ್ನು ಬಂದ್ ಮಾಡಿ.
*ಕೆರೆ-ನಾಲೆಗಳಿಗೆ ನೀರು ಬಿಡಿ: ನಮ್ಮ ಹಳ್ಳಿಗಳ ಕೆರೆಗಳಿಗೆ ಮತ್ತು ನಾಲೆಗಳಿಗೆ ತಕ್ಷಣ ನೀರು ಬಿಟ್ಟು, ರೈತರ ಜಮೀನುಗಳಿಗೆ ಮತ್ತು ಬೆಳೆಗಳಿಗೆ ನೀರು ಒದಗಿಸುವ ಕೆಲಸವಾಗಬೇಕು.
ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ, ಮುಖ್ಯಮಂತ್ರಿಗಳೇ, ಒಮ್ಮೆ ಮಂಡ್ಯದ ನದಿಯೊಳಗೆ ಇಳಿದು ಹೋರಾಡುತ್ತಿರುವ ರೈತರ ಆಕ್ರೋಶವನ್ನು ಕಣ್ಣು ಬಿಟ್ಟು ನೋಡಿ. ನಮ್ಮ ರೈತರಿಗೆ ಕೊಡಲು ನೀರಿಲ್ಲದಿದ್ದರೂ, ನಿಮ್ಮ ಹೈಕಮಾಂಡ್ ನಾಯಕರನ್ನ, ನೆರೆ ರಾಜ್ಯದವರನ್ನು ತೃಪ್ತಿಪಡಿಸಲು ನೀವು ಮುಂದಾಗಿರುವುದು ಇಡೀ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹ. ಸಿಎಂ ಡಿ.ಕೆ. ಶಿವಕುಮಾರ್ ಅವರೇ, ರೈತರ ಹೊಟ್ಟೆಗೆ ಹೊಡೆದು ನೀವು ಯಾರನ್ನು ಉದ್ಧಾರ ಮಾಡಲು ಹೊರಟಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು