10:35 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು | ಸುರತ್ಕಲ್ ಬಳಿ 6 ಮಂದಿ ಅಕ್ರಮ ಬಾಂಗ್ಲಾದೇಶ ವಲಸಿಗರು ಬಂಧನ

10/07/2026, 22:16

ಮಂಗಳೂರು(reporterkarnataka.com): ಸುರತ್ಕಲ್ ಬಳಿ ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಯಾವುದೇ ಕಾನೂನುಬದ್ಧ ದಾಖಲೆಗಳಿಲ್ಲದೆ ಭಾರತದ ಗಡಿಯೊಳಗೆ ನುಸುಳಿ, ಮಂಗಳೂರಿನಲ್ಲಿ ತಂಗಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸೂರತ್ಕಲ್ ವ್ಯಾಪ್ತಿಯಲ್ಲಿ ಇವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಬಾಂಗ್ಲಾದೇಶಿ ವಲಸಿಗರು ಮಂಗಳೂರಿನ ಸುರತ್ಕಲ್‌ನ ಮುಕ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಖಾಸಗಿ ಆಸ್ಪತ್ರೆಯೊಂದರ ಕಟ್ಟಡ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕಡಿಮೆ ಕೂಲಿಗೆ ಸಿಗುತ್ತಾರೆಂಬ ಕಾರಣಕ್ಕೆ ಇವರನ್ನು ಕೆಲಸಕ್ಕೆ ನಿಯೋಜಿಸಲಾಗಿತ್ತೇ ಅಥವಾ ಇವರ ಹಿನ್ನೆಲೆಯ ಬಗ್ಗೆ ಗುತ್ತಿಗೆದಾರರಿಗೆ ಮಾಹಿತಿ ಇತ್ತೇ ಎಂಬಿತ್ಯಾದಿ ಕೋನಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು