10:35 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಾಂಗ್ಲಾದೇಶಿಗರು ಪತ್ತೆ ರಾಜ್ಯ ಸರಕಾರಕ್ಕೆ ಎಚ್ಚರಿಕೆಯ ಗಂಟೆ: ಡಾ. ಭರತ್ ಶೆಟ್ಟಿ

10/07/2026, 22:27

ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶಿಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಇಂತಹ ಅಕ್ರಮ ನುಸುಳುವಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ಇದರ ಪರಿಣಾಮ ಭೀಕರವಾಗಿರುತ್ತದೆ. ಬಾಂಗ್ಲಾ ದೇಶಗರನ್ನು ಹೊರಹಾಕಲು ಕೇಂದ್ರ ಸರಕಾರದ ಜೊತೆ ರಾಜ್ಯ ಸರಕಾರ ಕೈಜೋಡಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ದುರದೃಷ್ಟವಶಾತ್ ರಾಜ್ಯದ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಅವರು ಕೇವಲ ಆರೆಸ್ಸೆಸ್, ಆರೆಸ್ಸೆಸ್ ಎಂದು
ಕನವರಿಸುವ ಬದಲು ದೇಶಕ್ಕೆ ನೇರ ಬೆದರಿಕೆಯಾಗಿರುವ ಇಂತಹ ಪ್ರಕರಣಗಳನ್ನು ಪತ್ತೆಹಚ್ಚುವತ್ತ ಗಮನ ಕೊಡಬೇಕು ಎಂದಿದ್ದಾರೆ.
ಈ ಬಾಂಗ್ಲಾದೇಶಿಗಳಿಗೆ ಅನಧಿಕೃತ ಆಧಾರ ಕಾರ್ಡ್ ಸೇರಿದಂತೆ ಎಲ್ಲಾ ಸೌಲಭ್ಯ ಒದಗಿಸಿಕೊಟ್ಟ ಏಜೆಂಟ್‌ಗಳು ಮತ್ತು ಅಧಿಕಾರಿಗಳ ಮೇಲೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಕೂಡಲೇ ಮುಂದಾಗಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕರಾವಳಿಯ ಜನರ ಜೀವ ಮತ್ತು ಸುರಕ್ಷತೆ ಬಲಿಯಾಗುತ್ತದೆ.
ರಾಜ್ಯದ ಗೃಹ ಸಚಿವಾಲಯ ಇದರ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಗಂಭೀರ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು