11:42 PM Saturday11 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಮೈಸೂರು ದಸರಾದಲ್ಲಿ ಕಂಬಳಕ್ಕೆ ಭಾರಿ ವಿರೋಧ: ಯದುವೀರ್ ಆಕ್ಷೇಪ ಬೆನ್ನಲ್ಲೇ ಕೇಂದ್ರ ಸಚಿವ ಎಚ್‌ಡಿಕೆ ವಾಗ್ದಾಳಿ

11/07/2026, 22:26

ಬೆಂಗಳೂರು(reporterkarnataka.com):ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿ ಭಾಗದ ಸಾಂಸ್ಕೃತಿಕ ಆಸ್ಮಿತೆಯಾಗಿರುವ ‘ಕಂಬಳ’ ಕ್ರೀಡೆಯನ್ನು ಆಯೋಜಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಈಗ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ.
ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ಈ ಪ್ರಸ್ತಾವನೆಯನ್ನು ಜುಲೈ 10ರಂದು ನಡೆದ ದಸರಾ ಉನ್ನತ ಮಟ್ಟದ ಪೂರ್ವಸಿದ್ಧತಾ ಸಭೆಯಲ್ಲಿ ಮಂಡಿಸಲಾಗಿತ್ತು. ಆದರೆ, ಈ ಹೊಸ ಸೇರ್ಪಡೆಗೆ ಮೈಸೂರು ರಾಜಮನೆತನ, ವಿರೋಧ ಪಕ್ಷಗಳು ಹಾಗೂ ಕೇಂದ್ರ ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಈ ಬಗ್ಗೆ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಅವರು ಎಕ್ಸ್​​ ಮೂಲಕ ಪೋಸ್ಟ್​ ಮಾಡಿದ್ದಾರೆ.

*ಎಚ್.ಡಿ. ಕುಮಾರಸ್ವಾಮಿ ಪೋಸ್ಟ್​​​ನಲ್ಲಿ ಏನಿದೆ?*
ಮೈಸೂರು ದಸರಾದಲ್ಲಿ ಕಂಬಳ ನಡೆಸುವ ನಿರ್ಧಾರವನ್ನು ವಿರೋಧಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಎಕ್ಸ್​​​ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾ ಪರಂಪರೆಗೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ. ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕವಾಗಿದ್ದು, ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯಾಗಿದೆ. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ ಹಾಗೂ ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮವಾಗಿದ್ದು, ಅಂತಹ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಡ,’ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.ಎಲ್ಲದಕ್ಕೂ ದಸರಾವನ್ನು ಜೋಡಿಸುವುದು ಸರಿಯಲ್ಲ: ಸಂಸದ ಯದುವೀರ್ ಒಡೆಯರ್ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಸರಾ ಸಭೆಯಲ್ಲೇ ಈ ಪ್ರಸ್ತಾವನೆಗೆ ನೇರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ದಸರಾದ ಸಾಂಸ್ಕೃತಿಕ ಹಿನ್ನೆಲೆಯೇ ಬೇರೆ, ಕಂಬಳದ ಹಿನ್ನೆಲೆಯೇ ಬೇರೆ. ಎಲ್ಲದಕ್ಕೂ ದಸರಾವನ್ನು ಜೋಡಿಸುವುದು ಸರಿಯಲ್ಲ. ಕರಾವಳಿ ಭಾಗದ ಸಾಂಸ್ಕೃತಿಕ ಕ್ರೀಡೆಗೆ ಮೈಸೂರಿನಲ್ಲಿ ಗೌರವವಿದೆ, ಆದರೆ ದಸರಾ ಸಮಯದಲ್ಲಿ ಇದು ಯಾಕೆ ಬೇಕು? ಹೊಸ ಆಕರ್ಷಣೆಗಾಗಿ ಅನಾವಶ್ಯಕವಾಗಿ ದಸರಾದಲ್ಲಿ ಇದನ್ನು ಸೇರಿಸುವುದು ಸೂಕ್ತವಲ್ಲ. ಕಳೆದ ಮೂರು ವರ್ಷಗಳಿಂದಲೂ ದಸರಾ ಅಷ್ಟಾಗಿ ಯಶಸ್ವಿಯಾಗಿ ನಡೆದಿಲ್ಲ. ಹೀಗಾಗಿ ಇರುವುದನ್ನೇ ಮೊದಲು ಅಚ್ಚುಕಟ್ಟಾಗಿ ಮಾಡಿ’ ಎಂದು ಯದುವೀರ್ ಸರ್ಕಾರಕ್ಕೆ ನೇರ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು