3:49 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮೈಸೂರಿನ ಕಣಿಯನಹುಂಡಿಯಲ್ಲಿ ಇಂದು ಸಂಜೆ ಖ್ಯಾತ ಗಾಯಕಿ ಎಸ್. ಜಾನಕಿ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವ

12/07/2026, 11:25

ಮೈಸೂರು(reporterkarnataka.com): ಮೈಸೂರಿನಲ್ಲಿ ಶನಿವಾರ ಸಂಜೆ ನಿಧನರಾದ ಖ್ಯಾತ ಗಾಯಕಿ ಎಸ್. ಜಾನಕಿ(88) ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಮೈಸೂರಿನ ಬೋಗಾದಿ ರಸ್ತೆಯ ಕಣಿಯನಹುಂಡಿಯಲ್ಲಿ ಭಾನುವಾರ ಸಂಜೆ ನೆರವೇರಲಿದೆ. ಅಂತ್ಯಸಂಸ್ಕಾರಕ್ಕೆ ಮುನ್ನ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಎಸ್.ಜಾನಕಿ ಅವರ ಇಚ್ಛೆಯಂತೆ ಅಂತ್ಯಕ್ರಿಯೆ ನೆರವೇರಲಿದೆ. ನವೀನ್ ಫಾರಂ ಹೌಸ್ ನಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ನಂತರ ಕಣಿಯನಹುಂಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಅವರ ಪುತ್ರ ಮುರಳಿಕೃಷ್ಣ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು, ಮೊಮ್ಮಗಳು ಅಪ್ಸರಾ ಅಂತ್ಯಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದು ಹೇಳಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಎಸ್. ಜಾನಕಿ ಅವರೇ ಮೈಸೂರಿನಲ್ಲಿ ಅಂತ್ಯ ಸಂಸ್ಕಾರ ನಡೆಸಬೇಕು ಎಂದು ಹೇಳಿದ್ದರು. ಮುಖ್ಯಮಂತ್ರಿಯವರು ದೂರವಾಣಿಯಲ್ಲಿ ಮಾತನಾಡಿ ಸರ್ಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸುವಂತೆ ಹೇಳಿದ್ದಾರೆ. ಕುಟುಂಬದವರೊಂದಿಗೆ ಚರ್ಚಿಸಿದ ಬಳಿಕ ಸಿಎಂ ನಿರ್ದೇಶನದ ಮೇರೆಗೆ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು