6:49 PM Thursday16 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ ದಾರುಣ ಸಾವು

16/07/2026, 18:48

ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಲಿಫ್ಟ್‌ನಲ್ಲಿ ತಲೆ ಸಿಲುಕಿದ ಪರಿಣಾಮ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ.

ಮೃತನನ್ನು ಧಾರವಾಡ ಮೂಲದ ರಾಜೇಶ್ ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಜಯನಗರದ ದಕ್ಷಿಣ ಉಪಹಾರ ಹೋಟೆಲ್‌ ನಲ್ಲಿ ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ನಡೆದಿದೆ. ಮಾಹಿತಿಯ ಪ್ರಕಾರ, ರಾಜೇಶ್ ಲಿಫ್ಟ್ ಮೂಲಕ 2ನೇ ಮಹಡಿಗೆ ತೆರಳುತ್ತಿದ್ದ ವೇಳೆ, ಲಿಫ್ಟ್ ಬಾಗಿಲಿನಲ್ಲಿ ಅವರ ತಲೆ ಸಿಲುಕಿಕೊಂಡಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು