ಇತ್ತೀಚಿನ ಸುದ್ದಿ
ಮಾದಕ ವಸ್ತು ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಮಹಾ ಸಮರ: 5 ಕೋಟಿ ಮೌಲ್ಯದ ಡ್ರಗ್ಸ್ ವಶ
16/07/2026, 21:42
ಮಂಗಳೂರು(reporterkarnataka.com): ಡ್ರಗ್ಸ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದು,ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಮಹಮ್ಮದ್ ಅಲ್ಫಾಜ್, ಮಹಮ್ಮದ್ ಮುಸ್ತಾಫಾ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಬಂಗಾಡಿ ಗ್ರಾಮದವರು. ಆರೋಪಿಗಳನ್ನು ಪೊಲೀಸರು ಬಾಗಲಕೋಟೆಯಲ್ಲಿ ಬಂಧನ ಮಾಡಿದ್ದಾರೆ. ಲೋಕಲ್ ಪೆಡ್ಲರ್ ಗಳಿಗೆ ಆರೋಪಿಗಳು ಡ್ರಗ್ಸ್ ಒದಗಿಸುತ್ತಿದ್ದರು.












