1:30 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

*ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ: 60:40 ಫಾರ್ಮುಲಾ ಅನುಸರಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ*

17/07/2026, 21:26

ನವದೆಹಲಿ(reporterkarnataka.com): ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ.
ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಒಲವು ತೋರಿದ್ದು, ಬಹುಶಃ ಮುಂದಿನ ವಾರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಅತ್ಯಂತ ನಂಬಿಕಸ್ಥ ಮೂಲಗಳಿಂದ ತಿಳಿದು ಬಂದಿದೆ.
ಸದ್ಯದ ಲೆಕ್ಕಾಚಾರಗಳ ಪ್ರಕಾರ, ಜುಲೈ 20ರ ವರೆಗೆ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಹೈಕಮಾಂಡ್ ತಾತ್ಕಾಲಿಕ ಬ್ರೇಕ್ ಹಾಕಿದ್ದು, ಆ ಬಳಿಕ ಹೊಸ ಸಚಿವರ ಸೇರ್ಪಡೆ ಪ್ರಕ್ರಿಯೆ ಚುರುಕುಗೊಳ್ಳಲಿದೆ.

*ಹಳೇ ಪಟ್ಟಿ ನೋಡಿ ಬೇಸರ ವ್ಯಕ್ತಪಡಿಸಿದ ರಾಹುಲ್ ಗಾಂಧಿ:* ಸಚಿವ ಸ್ಥಾನಕ್ಕಾಗಿ ರಾಜ್ಯ ನಾಯಕರು ಸಿದ್ಧಪಡಿಸಿ ಕಳುಹಿಸಿದ್ದ ಹಳೇ ಮುಖಗಳನ್ನೊಳಗೊಂಡ ಪಟ್ಟಿಯನ್ನು ಕಂಡು ಎಐಸಿಸಿ ನಾಯಕ ರಾಹುಲ್ ಗಾಂಧಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದಲ್ಲಿ ಎರಡನೇ ಹಂತದ ಹೊಸ ನಾಯಕತ್ವವನ್ನು ಬೆಳೆಸಬೇಕಾದ ಅಗತ್ಯವಿದೆ. ಆದ್ದರಿಂದ ಹಳೆಯ ಮುಖಗಳನ್ನೇ ಮತ್ತೆ ಸಚಿವರನ್ನಾಗಿ ಮಾಡುವ ಬದಲು, ಈ ಬಾರಿ ಹೊಸಬರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
’60:40′ ಹೊಸ ಸೂತ್ರದ ಜಾರಿ: ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹೊಸದಾಗಿ ’60:40′ ಸೂತ್ರವನ್ನು ಮುಂದಿಟ್ಟಿದೆ. ಇದರ ಪ್ರಕಾರ, ಶೇಕಡಾ 40 ರಷ್ಟು ಹಿರಿಯ ಶಾಸಕರು ಮತ್ತು ಮಾಜಿ ಸಚಿವರಿಗೆ ಅವಕಾಶ ನೀಡಿದರೆ, ಇನ್ನುಳಿದ ಶೇಕಡಾ 60 ರಷ್ಟು ಸ್ಥಾನಗಳನ್ನು ಕಡ್ಡಾಯವಾಗಿ ಈವರೆಗೆ ಒಮ್ಮೆಯೂ ಸಚಿವರಾಗದ ಹೊಸಬರಿಗೆ ಮೀಸಲಿಡಬೇಕು. ಈ ಮೂಲಕ ಸಚಿವ ಸಂಪುಟದಲ್ಲಿ ಹೊಸ ತಲೆಮಾರಿನ ಯುವ ನಾಯಕರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ನೋಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು