2:21 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಫಿಫಾ ವಿಶ್ವಕಪ್ | ಫುಟ್ ಬಾಲ್ ಫ್ಯಾನ್ಸು ದಯವಿಟ್ಟು ತಾಳ್ಮೆಯಿಂದ ಇರಬೇಕು: ಸಿಎಂ ಡಿ.ಕೆ.ಶಿವಕುಮಾರ್ ಮನವಿ

19/07/2026, 21:39

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಒಂದೆಡೆ ಫುಟ್‌ಬಾಲ್ ಹಬ್ಬದ ಸಂಭ್ರಮ ಮನೆಮಾಡಿದ್ದರೆ, ಇನ್ನೊಂದೆಡೆ ಭೀಕರ ಬರ ಪರಿಸ್ಥಿತಿಯ ಸವಾಲು ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯದ ವೀಕ್ಷಣೆಗೆ ಯುವಜನರ ಬೇಡಿಕೆಯಂತೆ ತಡರಾತ್ರಿವರೆಗೆ ಹೋಟೆಲ್‌ಗಳು ತೆರೆದಿರಲು ವಿಶೇಷ ಅನುಮತಿ ನೀಡಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಇದರ ಜೊತೆಗೆ, ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ದಿನದ 24 ಗಂಟೆಯೂ ಕೆಲಸ ಮಾಡಬೇಕು ಎಂದು ಅವರು ಕಡಕ್ ಆದೇಶ ನೀಡಿದ್ದಾರೆ.
ವಿಧಾನಸೌಧದಲ್ಲಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿಗಳು, ಯುವಕರ ಇಚ್ಛೆ ಮತ್ತು ಮನವಿಗೆ ಸ್ಪಂದಿಸಿ ಇಂದು ರಾತ್ರಿ ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯದ ನೇರ ಪ್ರಸಾರ ವೀಕ್ಷಣೆಗಾಗಿ ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಿಸಿದರು.


ಪಂದ್ಯದ ವೇಳೆ ಅಭಿಮಾನಿಗಳು ಮತ್ತು ಯುವಜನರು ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬಾರದು. ಯಾವುದೇ ತಂಡ ಗೆದ್ದರೂ ಕ್ರೀಡಾ ಮನೋಭಾವದಿಂದ ಪಂದ್ಯವನ್ನು ಆಸ್ವಾದಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಪೊಲೀಸರು ಎಲ್ಲೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದೆ ಶಾಂತಿಯುತವಾಗಿ ವರ್ತಿಸಬೇಕು ಎಂದು ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು