9:51 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೃಷ್ಣಾಪುರ ಶಾಖೆಯ ಗ್ರಾಹಕರ ಸಭೆ

20/07/2026, 19:04

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾಪುರ ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಗ್ರಾಹಕರುಗಳಾದ ಶ್ರೀ ಪಿ. ಕೆ. ಉಪಾಧ್ಯಾಯ. ಶ್ರೀ ಅನಿಲ್ ಕುಮಾರ್, ಶ್ರೀ ಬಾಲಚಂದ್ರ ಪಣಂಬೂರು, ಶ್ರೀಮತಿ ಶೋಭ, ಶ್ರೀ ಅಬ್ದುಲ್ ಖಾದರ್ ಮತ್ತು ಶ್ರೀಮತಿ ಎಚ್. ಆರ್. ಯದುನಂದಿನಿ ಅವರುಗಳು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಪಿ.ಕೆ. ಉಪಾಧ್ಯಾಯ ಅವರು “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೃಷ್ಣಾಪುರ ಪರಿಸರದಲ್ಲಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ದೈನಂದಿನ ವ್ಯವಹಾರಕ್ಕೆ ಉತ್ತಮ ಸೊಸೈಟಿಯಾಗಿದೆ. ಇನ್ನಷ್ಟೂ ಶಾಖೆಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ತೆರೆಯಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಶ್ರೀ ಅನಿಲ್ ಕುಮಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಗ್ರಾಹಕ-ಸ್ನೇಹಿ ಸಹಕಾರಿ ಸಂಘವಾಗಿದ್ದು, ಶಾಖೆಗಳಿಗೆ ಭೇಟಿ ನೀಡಿದಾಗ ಸಿಬ್ಬಂದಿಗಳ ಸಹಕಾರ ಅತ್ಯುತ್ತಮವಾಗಿದ್ದು, ನಗುಮುಖದಿಂದ ಸೇವೆಯನ್ನು ನೀಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಗ್ರಾಹಕರಿಗೆ ಅಗತ್ಯ ಸಂದರ್ಭಗಳಲ್ಲಿ ಮನೆ ಬಾಗಿಲಿಗೆ ಸೇವೆಯನ್ನು ನೀಡಲಾಗುತ್ತಿದೆ. ಕೃಷ್ಣಾಪುರ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ಮೌಲ್ಯವನ್ನು ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ, ಶ್ರೀ ರಮಾನಾಥ ಸನಿಲ್, ಮುಖ್ಯ ಕಾರ್ಯನಿರ್ವಹಣಾದಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಕೃಷ್ಣಾಪುರ ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಅಶ್ವಿನಿ ಅವರು ಸ್ವಾಗತಿಸಿ , ಶಾಖಾಧಿಕಾರಿ ಶ್ರೀಮತಿ ಸುಜಾತ ಅವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು