2:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬೆಂಗಳೂರು | ಶಿವಾಜಿನಗರ ಫುಟ್ ಪಾತ್ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: 10 ಆರೋಪಿಗಳ ಬಂಧನ

21/07/2026, 20:17

ಬೆಂಗಳೂರು(reporterkarnataka.com): ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ 10 ಮಂದಿಯನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಿರಣ್ (34), ಬಸವರಾಜ್ (28), ರಂಜಿತ್ (19), ರಂಗಸ್ವಾಮಿ (49), ಮುಜಾಹಿದಾ ಅಹಮದ್ (39), ಕೊಟ್ರೇಶ್ (26), ಪರಶುರಾಮ್ (27), ರಘು (28), ಪಾರ್ಥೀಬನ್ (23) ಹಾಗೂ ಭರತ್ (24) ಎಂದು ಗುರುತಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಜಿಬಿಎ ಅಧಿಕಾರಿಗಳು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ 10 ಆರೋಪಿಗಳನ್ನು ಬಂಧಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ನ್ಯಾಯಾಲಯದ ಆದೇಶದಂತೆ ನಗರದಲ್ಲಿ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಬಂಧಿತರ ಹಿನ್ನೆಲೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು