ಇತ್ತೀಚಿನ ಸುದ್ದಿ
ಅವನು ನಾನಲ್ಲ, ವೀಡಿಯೊ ನನ್ನದಲ್ಲ: ಕೇಂದ್ರ ಮಾಜಿ ಸಚಿವ, ಬಿಜೆಪಿ ಸಂಸದ ದೇವರಗುಂಡ ಸದಾನಂದ ಗೌಡ ಸ್ಪಷ್ಟನೆ
20/09/2021, 18:15
ಬೆಂಗಳೂರು(reporterkarnataka.com): ವಿಡಿಯೊದಲ್ಲಿ ಇರುವುದು ನಾನಲ್ಲ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಕೇಂದ್ರ ಮಾಜಿ ಸಚಿವ, ಬಿಜೆಪಿ ಸಂಸದ ಡಿ.ವಿ.ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ಟ್ವಿಟರ್ ಮತ್ತು ಫೇಸ್‌ಬುಕ್ ನಲ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಅವರು ಬರೆದಿದ್ದಾರೆ.
ಸದಾನಂದ ಗೌಡ ಅವರು ಕೇಂದ್ರ ಸಂಪುಟ ಪುನಾರಚಣೆ ವೇಳೆ ತನ್ನ ವಿರುದ್ಧ ಯಾವುದೇ ಮಾನಹಾನಿಕರ ವೀಡಿಯೊ ಬಿಡುಗಡೆ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.