10:16 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ ಹಲ್ಲೆ

23/07/2026, 19:00

ಚಿಕ್ಕಮಗಳೂರು(reporterkarnataka.com): ತೋಟದಲ್ಲಿ ತೆಂಗಿನಕಾಯಿ ಕದ್ದಳು ಎಂದು ಆರೋಪ ಮಾಡಿದ ಜಮೀನಿನ ಮಾಲೀಕ ಮಹಿಳೆಗೆ ಅಮಾನುಷವಾಗಿ ಥಳಿಸಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಾತೇನಗಳ್ಳಿ ಗ್ರಾಮದಲ್ಲಿ ನಡೆದಿದೆ.
ಮೂವರು ಪುರುಷರು ಸೇರಿ ಮಹಿಳೆಯ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
ಕಡೂರು ತಾಲೂಕಿನ ಪಾತೇನಗಳ್ಳಿ ಗ್ರಾಮದಲ್ಲಿ ಶಿವಮ್ಮ (32) ಎಂಬ ಮಹಿಳೆ ಮೇಲೆ ತೆಂಗಿನಕಾಯಿ ಕದ್ದ ಆರೋಪ ಕೇಳಿ ಬಂದಿದೆ. ಮಾಲೀಕ ನವೀನ್ ತೋಟದ ಮಾರ್ಗವಾಗಿಯೇ ಮಹಿಳೆ ಬೇರೆ ಸ್ಥಳಕ್ಕೆ ಹೋಗುತ್ತಿದ್ದಳು. ಈ ವೇಳೆ ತೆಂಗಿನಕಾಯಿ ಹಿಡಿದುಕೊಂಡಿದ್ದಳಂತೆ. ಇದು ನಮ್ಮ ತೋಟದ ತೆಂಗಿನ ಕಾಯಿ ಎಂದು ಜಗಳ ತೆಗೆದ ಮಾಲೀಕ ನವೀನ್​ ಏಕಾಏಕಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗ್ತಿದೆ.

*ಮಹಿಳೆಯ ಬಟ್ಟೆ ಹರಿದು ಹಲ್ಲೆ:*
ನವೀನ್, ಕಲ್ಲೇಶ್ ಹಾಗೂ ದೀಪು ಎಂಬುವರು ಸೇರಿಕೊಂಡು ಮಹಿಳೆಯನ್ನ ಥಳಿಸಿದ್ದಾರೆ ಎಂಬ ಆರೋಪವಿದೆ. ಒಂದು ತೆಂಗಿನ ಕಾಯಿ ವಿಚಾರಕ್ಕೆ ಮಹಿಳೆಯ ಬಟ್ಟೆ ಹರಿದು, ನೆಲಕ್ಕೆ ಹಾಕಿ ತುಳಿ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

*ಮಹಿಳೆ ಆಸ್ಪತ್ರೆಗೆ ದಾಖಲು:*
ತೆಂಗಿನ ಕಾಯಿ ಕದ್ದ ಆರೋಪದ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಶಿವಮ್ಮ ಆರೋಪ ಮಾಡಿದ್ದಾರೆ. ಗಾಯಾಳು ಶಿವಮ್ಮ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾತೇನಹಳ್ಳಿ ಗ್ರಾಮದ ಪಾಳುಬಿದ್ದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಶಿವಮ್ಮ ಮೇಲೆ ತೋಟದಲ್ಲಿ ತೆಂಗಿನಕಾಯಿ ಕದ್ದಿರುವ ಆರೋಪ ಮಾಡಿ ಮೂವರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು