1:21 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಕೂಲಿ ವಿವಾದ: ಕಾರ್ಮಿಕರನ್ನು ಬೆದರಿಸಲು ಹೋದ ತೋಟದ ಮಾಲೀಕನಿಂದ ಮಿಸ್‌ ಫೈರ್; ಮಗುವಿಗೆ ಗಂಭೀರ ಗಾಯ

24/07/2026, 18:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೂಲಿ ಹಣದ ವಿಚಾರವಾಗಿ ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಉಂಟಾದ ಜಗಳ ತಾರಕಕ್ಕೇರಿ, ಮಾಲೀಕ ನಡೆಸಿದ ಮಿಸ್‌ ಫೈರಿಂಗ್‌ನಿಂದಾಗಿ ಅಪ್ರಾಪ್ತ ಮಗುವಿನ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ನಡೆದಿದೆ.
*​ಘಟನೆಯ ಹಿನ್ನೆಲೆ:*
​ಬಾಳೆಹಳ್ಳಿ ಗ್ರಾಮದ ತೋಟದ ಮಾಲೀಕ ಜಗದೀಶ್ ಗೌಡ ಎಂಬುವರ ಬಳಿ ಅಸ್ಸಾಂ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ದಿನವೊಂದಕ್ಕೆ 400 ರೂಪಾಯಿ ಕೂಲಿ ನೀಡುವಂತೆ ಕಾರ್ಮಿಕರು ಪಟ್ಟು ಹಿಡಿದಿದ್ದರು. ಆದರೆ ಮಾಲೀಕ ಜಗದೀಶ್ ಗೌಡ, “ಈಗ 350 ರೂಪಾಯಿ ನೀಡುತ್ತೇನೆ, ಬಾಕಿ 50 ರೂಪಾಯಿಯನ್ನು ಆಮೇಲೆ ಕೊಡುತ್ತೇನೆ” ಎಂದು ಹೇಳಿದ್ದಾರೆ ಎನ್ನಲಾಗಿದೆ.
​ಇದಕ್ಕೆ ಒಪ್ಪದ ಕಾರ್ಮಿಕರು, “ಈಗಲೇ 400 ರೂಪಾಯಿ ಕೊಟ್ಟರೆ ಮಾತ್ರ ಕೆಲಸ ಮಾಡುತ್ತೇವೆ, ಇಲ್ಲವಾದಲ್ಲಿ ಕೆಲಸ ಮಾಡುವುದಿಲ್ಲ” ಎಂದು ಅಲ್ಲಿಂದ ಹೊರಡಲು ಅನುವಾಗಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು, ಕಾರ್ಮಿಕರು ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

*​ಮಿಸ್‌ ಫೈರ್‌ – ಮಗುವಿಗೆ ಗಾಯ:*
​ಸ್ಥಿತಿ ಕೈಮೀರುತ್ತಿದ್ದಂತೆ ಕಾರ್ಮಿಕರನ್ನು ಬೆದರಿಸಲು ತೋಟದ ಮಾಲೀಕ ಜಗದೀಶ್ ಗೌಡ ಬಂದೂಕಿನಿಂದ ಗುಂಡು ಹಾರಿಸಲು ಯತ್ನಿಸಿದ್ದು, ಈ ವೇಳೆ ಆಕಸ್ಮಿಕವಾಗಿ ಮಿಸ್‌ ಫೈರ್ ಆಗಿದೆ. ಪರಿಣಾಮವಾಗಿ ಸ್ಥಳದಲ್ಲಿದ್ದ ಅಪ್ರಾಪ್ತ ಮಗುವಿನ ತಲೆಗೆ ಗುಂಡು ತಾಗಿ ಗಂಭೀರ ಗಾಯಗಳಾಗಿವೆ.

*​ಆಸ್ಪತ್ರೆಗೆ ದಾಖಲು:*
​ಗಾಯಗೊಂಡ ಮಗುವನ್ನು ತಕ್ಷಣವೇ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಮಗುವಿನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದರಿಂದ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
​ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು