5:02 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಬೆಂಗಳೂರು: ಜುಲೈ 27ರಂದು ಸಂತ ಜೋಸೆಫರ ವಿಶ್ವವಿದ್ಯಾಲಯದಲ್ಲಿ ‘ಓಪನ್ ಡೇ 2026’

25/07/2026, 21:57

ಬೆಂಗಳೂರು(reporterkarnataka.com): ಲಾಲ್‌ಬಾಗ್ ರಸ್ತೆಯಲ್ಲಿರುವ ಪ್ರತಿಷ್ಠಿತ ಸಂತ ಜೋಸೆಫರ ವಿಶ್ವವಿದ್ಯಾಲಯವು ತನ್ನ ವಾರ್ಷಿಕ ಶೈಕ್ಷಣಿಕ ಪ್ರದರ್ಶನವಾದ ‘ಓಪನ್ ಡೇ 2026’ ((Open Day-2026) ಅನ್ನು ಜುಲೈ 27ರಂದು ಬೆಳಿಗ್ಗೆ 8:00 ರಿಂದ ಸಂಜೆ 4:00 ರವರೆಗೆ ಆಯೋಜಿಸಿದೆ. ಮುಂಬರುವ ವರ್ಷಗಳಲ್ಲಿ ಈ ವಿಶ್ವವಿದ್ಯಾಲಯವನ್ನು ಪ್ರವೇಶಿಸಲು ಬಯಸುವ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಸಾರ್ವಜನಿಕರಿಗೆ ವಿಶ್ವವಿದ್ಯಾಲಯದ ಶೈಕ್ಷಣಿಕ ಕೊಡುಗೆಗಳು, ಸಂಶೋಧನೆ ಮತ್ತು ಕ್ಯಾಂಪಸ್ ಜೀವನವನ್ನು ಪರಿಚಯಿಸುವ ಉದ್ದೇಶದಿಂದ ಈ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಲ್ಲದೆ, ಶಾಲೆಗಳು, ಕಾಲೇಜುಗಳು, ಶಿಕ್ಷಣ ತಜ್ಞರು ಮತ್ತು ಕೈಗಾರಿಕಾ ವಲಯದ ನಾಯಕರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ಮಹತ್ವದ ಸಂವಾದವನ್ನು ಬೆಳೆಸುವ ವಿಶಿಷ್ಟ ಸಹಯೋಗದ ವೇದಿಕೆಯಾಗಿ ಈ ಕಾರ್ಯಕ್ರಮ ರೂಪುಗೊಳ್ಳಲಿದೆ.
ಈ ಬಾರಿಯ ’ಓಪನ್ ಡೇ 2026’ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರ ಸಮಾವೇಶ (Principal conclave), ಟೆಡ್‌ಎಕ್ಸ್ (TEDx) ವಿದ್ಯಾರ್ಥಿ ಭಾಷಣಗಳು, ಪ್ರೌಢಶಾಲಾ ವಿದ್ಯಾರ್ಥಿಗಳ ವಸ್ತುಪ್ರದರ್ಶನ ಮತ್ತು ಮೌಲ್ಯಮಾಪನ, ವಿದ್ಯಾರ್ಥಿ ಸಂಸದೀಯ ಅಧಿವೇಶನ, ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭಗಳು ಪ್ರಮುಖ ಆಕರ್ಷಣೆಯಾಗಿರಲಿವೆ.
ವಿಶ್ವವಿದ್ಯಾಲಯದ ಶೈಕ್ಷಣಿಕ ಮತ್ತು ಪಠ್ಯ ಚಟುವಟಿಕೆಗಳ ವ್ಯವಸ್ಥೆಯ ಕುರಿತು ನೇರ ಮಾಹಿತಿ ಪಡೆಯಲು, ಸಂದರ್ಶಕರಿಗೆ ಬೋಧಕವರ್ಗ, ವಿದ್ಯಾರ್ಥಿಗಳು ಮತ್ತು ಉದ್ಯಮ ವಲಯದ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸುವ ಅವಕಾಶ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು