6:17 AM Thursday5 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಗಸ್ಟ್ 1ಕ್ಕೆ ಮೈಸೂರಿಗೆ: ಬಹುನಿರೀಕ್ಷಿತ ‘ವಿವೇಕ ಸ್ಮಾರಕ’ ಲೋಕಾರ್ಪಣೆ

27/07/2026, 11:26

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.
ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ನೆನಪನ್ನು ಶಾಶ್ವತಗೊಳಿಸಲು ನಿರ್ಮಿಸಲಾಗಿರುವ ಬಹುನಿರೀಕ್ಷಿತ ‘ವಿವೇಕ ಸ್ಮಾರಕ’ವನ್ನು ಪ್ರಧಾನಿಯವರು ಲೋಕಾರ್ಪಣೆಗೊಳಿಸಲಿದ್ದಾರೆ. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿರುವ ಈ ಮಹತ್ವದ ಕಾರ್ಯಕ್ರಮಕ್ಕಾಗಿ ಈಗಾಗಲೇ ಭರದ ಸಿದ್ಧತೆಗಳು ಸಾಗುತ್ತಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಆಗಸ್ಟ್ 1ರ ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 2.55ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿದ್ದಾರೆ. ಅಲ್ಲಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 3.15ಕ್ಕೆ ನಗರದ ಓವಲ್ ಮೈದಾನಕ್ಕೆ ತಲುಪಿ, ಬಳಿಕ ಮಧ್ಯಾಹ್ನ 3.25ಕ್ಕೆ ರಸ್ತೆ ಮಾರ್ಗವಾಗಿ ನೇರವಾಗಿ ವಿವೇಕ ಸ್ಮಾರಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಧಾನಿಗಳ ಮಿನಿಟ್-ಟು-ಮಿನಿಟ್ ಪ್ರವಾಸದ ವೇಳಾಪಟ್ಟಿ ಈಗಾಗಲೇ ಅಧಿಕೃತವಾಗಿ ಸಿದ್ಧವಾಗಿದೆ. ನಂತರ ಮಧ್ಯಾಹ್ನ 3.30ರಿಂದ ಸಂಜೆ 5.15 ರವರೆಗೆ ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಲಾಗಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಭಾಗವಹಿಸಲಿದ್ದಾರೆ. ಇದೇ ಶುಭ ಸಂದರ್ಭದಲ್ಲಿ ಅವರು ‘ವಿವೇಕ ಸ್ಮಾರಕ’ವನ್ನು ಅಧಿಕೃತವಾಗಿ ಉದ್ಘಾಟಿಸಿ ನಾಡಿಗೆ ಸಮರ್ಪಿಸಲಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ನಂತರ, ಸಂಜೆ 5.20ಕ್ಕೆ ರಾಮಕೃಷ್ಣ ಆಶ್ರಮದ ಶಾಲೆಗೆ ಹ್ರಸ್ವ ಭೇಟಿ ನೀಡಲಿದ್ದಾರೆ.

ತಮ್ಮ ಪ್ರವಾಸದ ಅಂತಿಮ ಹಂತವಾಗಿ ಸಂಜೆ 5.30ಕ್ಕೆ ಮತ್ತೆ ಓವಲ್ ಮೈದಾನಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಂತಿಮವಾಗಿ ಸಂಜೆ 5.55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ವಾಪಸ್ ಆಗಲಿದ್ದಾರೆ. ಪ್ರಧಾನಿಗಳ ಈ ಭೇಟಿಯು ಮೈಸೂರಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಹಿರಿಮೆಗೆ ಮತ್ತಷ್ಟು ಮೆರುಗು ನೀಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು