6:43 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಎಕೆ-47 ನಿಂದ ಗುಂಡಿನ ದಾಳಿ: ಮೂವರಿಗೆ ಗಂಭೀರ ಗಾಯ; ಬಿಹಾರ ಪೊಲೀಸ್ ಅಮಾನತು

27/07/2026, 22:05

ಪಾಟ್ನಾ(reporterkarnataka.com): ಬಿಹಾರ ಬಂದ್‌ ವೇಳೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಟೋಮ್ಯಾಟಿಕ್ ಎಕೆ-47 ಬಂದೂಕಿನಿಂದ ಗುಂಡಿನ ದಾಳಿ ನಡೆಸಿದ್ದ ಪೊಲೀಸ್ ಪೇದೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ಭೀಕರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆದ ಬೆನ್ನಲ್ಲೇ ಬಿಹಾರ ಪೊಲೀಸ್ ಕೇಂದ್ರ ಕಚೇರಿ ಈ ಕಠಿಣ ಕ್ರಮ ಕೈಗೊಂಡಿದೆ. ಜುಲೈ 25 ರಂದು ‘ಬಿಹಾರ ಬಂದ್’ ಅಂಗವಾಗಿ ಸಿವಾನ್ ಜಿಲ್ಲೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದವು. ಗಾಂಧಿ ಮೈದಾನದತ್ತ ಮೆರವಣಿಗೆ ಸಾಗುತ್ತಿದ್ದಾಗ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿತ್ತು. ಈ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು ನೇರವಾಗಿ ವಿದ್ಯಾರ್ಥಿಗಳತ್ತ ಎಕೆ-47 ನಿಂದ ಗುಂಡು ಹಾರಿಸಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

*ಮೂವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು*
ಪೋಲಿಸರ ಗುಂಡಿನ ದಾಳಿಯಿಂದ ಗಾಯಗೊಂಡ ಮೂವರು ಪ್ರತಿಭಟನಾಕಾರರನ್ನು ಪಾಟ್ನಾದ ಜಯಪ್ರಭಾ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಗಾಯಗೊಂಡವರಲ್ಲಿ 15 ವರ್ಷದ ಮೊಹಮ್ಮದ್ ಆರಿಫ್ ಎಂಬ ಬಾಲಕನೂ ಸೇರಿದ್ದಾನೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಚ್ಚಿ ಮನೆಗೆ ಮರಳುತ್ತಿದ್ದಾಗ ಆರಿಫ್‌ನ ಕತ್ತಿನ ಭಾಗಕ್ಕೆ ಗುಂಡು ತಗಲಿತ್ತು. ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಂಡನ್ನು ಹೊರತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು