4:48 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸರಕಾರಿ ಅಧಿಕಾರಿಗಳು ಜನರ ಕೆಲಸಕ್ಕೆ ಲಂಚ ಕೇಳಿದರೆ ಎಸಿಬಿಗೆ ಧೈರ್ಯದಿಂದ ದೂರು ನೀಡಿ: ಸಿಐ ಫಾರೂಕ್

21/09/2021, 09:05

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸರಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚ ಕೇಳಿದಲ್ಲಿ ಅಂತವರ ವಿರುದ್ಧ ಧೈರ್ಯದಿಂದ ಎಸಿಬಿಗೆ ದೂರು ನೀಡುವ ಮೂಲಕ ಭ್ರಷ್ಟಾಚಾರವನ್ನು ನಿರ್ಮೂಲನೆಗೆ ಸಹಕರಿಸಿ ಎಂದು ಭ್ರಷ್ಟಾಚಾರ ನಿಗ್ರಹ ದಳದ ಇನ್ಸ್‌ಪೆಕ್ಟರ್‌ ಫಾರೂಖ್ ಮನವಿ ಮಾಡಿದರು.

ತಾಲೂಕಿನ ಹೊರವಲಯದ ದೊಡ್ಡ ಹಸಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಶನಿವಾರ ಭ್ರಷ್ಟಾಚಾರ ನಿಗ್ರಹ ದಳದಿಂದ ಸಾರ್ವಜನಿಕರ ಕುಂದುಕೊರತೆಗಳ ಸಭೆ , ಜಾಗೃತಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭ್ರಷ್ಟಾಚಾರ ನಿರ್ಮೂಲನೆಗೆ ಸಂಬಂಧಿಸಿದಂತೆ ಸರಕಾರದಿಂದ ಕಾಯಿದೆ ಜಾರಿ ಮಾಡಿದ್ದು , ಇದನ್ನು ಅನುಷ್ಠಾನಗೊಳಿಸಲು ಎಲ್ಲರೂ ಸಹಕರಿಸಬೇಕು. ಇದಕ್ಕೆ ದೂರುದಾರರ ಹೆಸರು ಮಾಹಿತಿಯನ್ನು ಗೌಪ್ಯವಾಗಿಟ್ಟು ತಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. 

ಸಮಾಜದಲ್ಲಿ ಹಣ ಕೊಟ್ಟು ಕೆಲಸ ಮಾಡಿಸಿಕೊಳ್ಳವ ಪ್ರವೃತ್ತಿ ಬಿಡಬೇಕು ಕೆಲಸ ಮಾಡುವುದು ಸರಕಾರಿ ಅಧಿಕಾರಿಯ ಜವಾಬ್ದಾರಿಯಾಗಿದೆ. ಭ್ರಷ್ಟಾಚಾರ ತಡೆಗಟ್ಟಿ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ಒದಗಿಸಬೇಕು ಎಂಬ ಉದ್ದೇಶದಿಂದ ಭ್ರಷ್ಟಾಚಾರ ನಿಗ್ರಹ ದಳವನ್ನು ಸರಕಾರ ಸ್ಥಾಪಿಸಿದೆ . ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳು ಇದ್ದಲ್ಲಿ ಮತ್ತು ನೌಕರರು ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಮಾಡಿದ್ದ ಬಗ್ಗೆ ಸೂಕ್ತ ದಾಖಲೆಗಳೊಂದಿಗೆ ದೂರು ನೀಡಬಹುದು ಇದರ ಬಗ್ಗೆ ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿಯ ಬಗ್ಗೆ ಜಾಗೃತಿ ಮೂಡಿಸುವ ನಾಮಫಲಕಗಳನ್ನು ಹಾಕಬೇಕು ಎಂದು ಹೇಳಿದರು.

ಭ್ರಷ್ಟಾಚಾರ ನಿಗ್ರಹ ದಳದ ಇನ್ಸ್ ಪೆಕ್ಟರ್ ಮಂಜುನಾಥ್ ಮಾತನಾಡಿ , ಭ್ರಷ್ಟಾಚಾರ ಇತ್ತೀಚೆಗೆ ಬಹಳ ಹೆಮ್ಮರವಾಗಿ ಬೆಳೆದಿದೆ ಇದನ್ನು ಬೇರು ಸಮೇತ ತೆಗೆಯಬೇಕು ಇದಕ್ಕೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಸರಕಾರಿ ನೌಕರರಿಗೆ ನಾವು ಕಟ್ಟುವ ತರಿಗೆ ಹಣದಲ್ಲಿ ಸರಕಾರದಿಂದ ಸಂಬಳ ಕೊಡತ್ತಾರೆ ನೌಕರರಿಗೆ ಹಣ ಕೊಡದೇ ನಮ್ಮ ಕೆಲಸ ಮಾಡಿಕೊಳ್ಳವ ಪ್ರವೃತ್ತಿ ನಮ್ಮಿಂದಲ್ಲೇ ಪ್ರಾರಂಭವಾಗಬೇಕು ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಲಂಚ ಕೇಳಿದರೆ ನಮ್ಮ ಸಂಸ್ಥೆಗೆ ದೂರು ನೀಡಬಹುದು ಎಂದರು . ಎಂಬ ಗ್ರಾಮದ ಟೈಲರ್ ಆನಂದ್ ಎಸಿಬಿಗೆ ದೂರು ನೀಡಿ , ಗ್ರಾಮ ಪಂಚಾಯತಿಯಲ್ಲಿ ಬಡವರಿಗೆ ಒಂದು ರೀತಿಯ ಕೆಲಸ ಶ್ರೀಮಂತರಿಗೆ ಒಂದು ರೀತಿಯ ಕೆಲಸ ನಡೆಯುತ್ತದೆ ಕಚೇರಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದರೆ ಸಾಕು ಪ್ರಭಾವಿಗಳಿಂದ ಒತ್ತಡ ತರುತ್ತಾರೆ ಪಂಚಾಯತಿಯಲ್ಲಿ ಕಾಮಗಾರಿಗಳು ಕೇವಲ ಪೋಟೊಗೆ ಸೀಮಿತವಾಗಿದೆ ಇದರ ಬಗ್ಗೆ ತನಿಖೆ ಮಾಡಬೇಕು ಎಂದು ದೂರಿದರು . ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿ.ಆರ್ ಗೌಡ , ದೊಡ್ಡ ಹಸಾಳ ಗ್ರಾಪಂ ಉಪಾಧ್ಯಕ್ಷ ನಾರಾಯಣಸ್ವಾಮಿ , ಎಸಿಬಿ ಹೆಡ್ ಕಾನ್ಸ್‌ಟೇಬಲ್ ಮಹೇಶ್ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿ , ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು