7:23 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು: ಜುನೈದ್​ ಗಂಭೀರ ಆರೋಪ

27/07/2026, 22:25

ನವದೆಹಲಿ(reporterkarnataka.com): ನೀಟ್​​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದಿದ್ದ ಪ್ರತಿಭಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಪ್ರತಿಭಟನಾಕಾರರಿಗೆ ಉಚಿತ ಆಹಾರ ಮತ್ತು ನೀರು ವಿತರಿಸುತ್ತಿದ್ದ ಮೊಹಮ್ಮದ್ ಜುನೈದ್ ನನ್ನು ದೆಹಲಿ ಪೊಲೀಸರು ಎಂದು ಹೇಳಿಕೊಂಡ ಕೆಲವರು ತಮ್ಮ ಕಣ್ಣಿಗೆ ಬಟ್ಟೆ ಕಟ್ಟಿ ರಾತ್ರಿಯಿಡೀ ಅಪಹರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.ಆದರೆ, ಈ ಆರೋಪವನ್ನು ಗಾಜಿಯಾಬಾದ್ ಪೊಲೀಸರು ತಳ್ಳಿ ಹಾಕಿದ್ದಾರೆ. ಇದು ಸಾಮಾನ್ಯ ವಿಚಾರಣೆಯಷ್ಟೇ. ಮುಸ್ತಫಾ ಅವರನ್ನು ಕೇವಲ ಪ್ರಶ್ನೆಗಾಗಿ ಕರೆಸಲಾಗಿತ್ತು ಮತ್ತು ಯಾವುದೇ ಬಂಧನ ನಡೆದಿಲ್ಲ ಎಂದು ಡಿಸಿಪಿ ಸುರೇಂದ್ರನಾಥ್ ತಿವಾರಿ ಸ್ಪಷ್ಟಪಡಿಸಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೊವೊಂದನ್ನೂ ಬಿಡುಗಡೆ ಮಾಡಿದ್ದಾರೆ.
ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಗಢಿ ಜುನೈದ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಜುನೈದ್ ಕಣ್ಣೀರಿಡುತ್ತಿರುವ ವಿಡಿಯೋ ನೋಡಿ ತಮಗೆ ತೀವ್ರ ನೋವಾಗಿದೆ ಎಂದಿರುವ ಅವರು, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ನಿಮ್ಮ ಮೇಲಿನ ದೌರ್ಜನ್ಯದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವ ಮೂಲಕ ಹೋರಾಡುತ್ತೇವೆ ಎಂದು ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು