ಇತ್ತೀಚಿನ ಸುದ್ದಿ
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು
27/07/2026, 22:30
ಬೆಂಗಳೂರು(reporterkarnataka.com): ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ನಡೆದಿದೆ.
ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಏಕಾಏಕಿ ಹೊತ್ತಿ ಉರಿದಿವೆ. ಮೊದಲು ಒಂದು ಖಾಸಗಿ ಬಸ್‌ನಲ್ಲಿ ಬೆಂಕಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸದ್ಯಕ್ಕೆ ಈ ಬಸ್‌ಗಳ ಮಾಲೀಕರ ವಿವರಗಳು ಲಭ್ಯವಾಗಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಕೂಡ ತಿಳಿದು ಬಂದಿಲ್ಲ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದಲ್ಲಿದ್ದ ಇತರ ಬಸ್‌ಗಳಿಗೂ ಹರಡಿದೆ. ಪರಿಣಾಮ ನಾಲ್ಕೂ ಬಸ್‌ಗಳು ಧಗಧಗನೆ ಹೊತ್ತಿ ಉರಿದು ಸಂಪೂರ್ಣವಾಗಿ ಭಸ್ಮವಾಗಿವೆ.












