6:51 PM Tuesday28 - July 2026
ಬ್ರೇಕಿಂಗ್ ನ್ಯೂಸ್
Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000…

ಇತ್ತೀಚಿನ ಸುದ್ದಿ

ಕಾವೇರಿ ನದಿ ನೀರು ಹಂಚಿಕೆ | CWRC ಆದೇಶದ ವಿರುದ್ಧ ಸಿಡಿದೆದ್ದ ರೈತರು: ರಕ್ತ ಕೊಟ್ಟರೂ ನೀರು ಬಿಡಲ್ಲ ಎಂದು ಆಕ್ರೋಶ; ಉಗ್ರ ಹೋರಾಟದ ಎಚ್ಚರಿಕೆ

28/07/2026, 18:44

ಬೆಂಗಳೂರು(reporterkarnataka.com): ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ರಾಜ್ಯಕ್ಕೆ ಆಘಾತ ನೀಡಿದೆ. ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. CWRC ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ರೈತರು ಸಿಡಿದೆದ್ದಿದ್ದಾರೆ.
ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ CWRC, ಪ್ರತಿ ದಿನ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ಗಳಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶ ನೀಡಿದೆ. ಇದಕ್ಕೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಮಂಡ್ಯ ಭಾಗದ ರೈತರ ಆಕ್ರೋಶ ಭುಗಿಲೆದ್ದಿದೆ.
CWRC ಆದೇಶಕ್ಕೆ ತೀವ್ರವಾಗಿ ವಿರೋಧಿಸಿರುವ ಕಾವೇರಿ ಕೊಳ್ಳದ ರೈತರು ಮಂಡ್ಯದಲ್ಲಿ ಬೀದಿಗಿಳುದು ಹೋರಾಟ ನಡೆಸುತ್ತಿದ್ದಾರೆ. ರಸ್ತೆಗಳಲ್ಲಿಯೇ ಉರುಳು ಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಕ್ತ ಹೋದರು ನೀರು ಬಿಡಲ್ಲ ಎಂದು ಕಿಡಿಕಾರಿದ್ದಾರೆ.ಮಂಡ್ಯದ ಸಂಜಯ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಕುಡಿಯಲು ನೀರಿಲ್ಲ. ಬೆಳೆಗಳಿಗೂ ನೀರಿಲ್ಲದೇ ಒಣಗುತ್ತಿವೆ. ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಕೊಡಿ ಎಂದು ಹೇಳಿದರೆ ಎಲ್ಲಿಂದ ಕೊಡುವುದು. CWRC ಆದೇಶ ರಾಜ್ಯದ ರೈತರಿಗೆ ಮರಣ ಶಾಸನವಾಗುತ್ತಿದೆ. ಕರ್ನಾಟಕದ ರೈತರ ಸ್ಥಿತಿಯನ್ನು ಮಾನವೀಯತೆಯಿಂದಲಾದರೂ ನೋಡುವುದು ಬೇಡವೇ? ಎಂದು ಗುಡುಗಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವುದರಿಂದ ನೀರಿಗಾಗಿ ಜನ-ಜಾನುವಾರುಗಳು ಪರಿತಪಿಸುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳುವುದು ಯಾವ ನ್ಯಾಯ? ಮಳೆ ಇಲ್ಲ, ಬೆಳೆ ಇಲ್ಲ. ಇಂತಹ ಸ್ಥಿತಿಯಲ್ಲಿ ರಾಜ್ಯ ಸರ್ಕಾತ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಒಂದು ಹನಿ ನೀರು ಬಿಡಬಾರದು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಈಗಲೇ ಮನವಿ ಮಾಡುತ್ತಿದ್ದೇವೆ. ರಾಜ್ಯದ ರೈತರ ಸಂಕಷ್ಟ ಆಲಿಸಿ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು