9:55 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್

28/07/2026, 18:48

ಬೆಂಗಳೂರು(reporterkarnataka.com): ರಸ್ತೆ ಬದಿಯಲ್ಲಿ ನಿಂತು ಕ್ಯಾಬ್‌ಗೆ ಕಾಯುತ್ತಿದ್ದ 26 ವರ್ಷದ ಯುವತಿಯೊಬ್ಬರಿಗೆ ನಿನ್ನ ರೇಟ್‌ ಎಷ್ಟು? ಎಂದು ಲೈಂಗಿಕವಾಗಿ ನಿಂದಿಸಿ ಪರಾರಿಯಾಗಿದ್ದ ಹಣ್ಣಿನ ವ್ಯಾಪಾರಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್‌ ನಿವಾಸಿ ಹಣ್ಣಿನ ವ್ಯಾಪಾರಿ ವಿಜಯರಾಘವ್‌ (42) ಬಂಧಿತ ಕಾಮುಕ. ಈತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಮೊನ್ನೆ ರಾತ್ರಿ ರಾಮಮೂರ್ತಿನಗರದ ರಾಘವೇಂದ್ರ ಸರ್ಕಲ್‌ ಬಳಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಯುವತಿಯೊಬ್ಬರು ಕ್ಯಾಬ್‌ ಬುಕ್‌ ಮಾಡಿ ಕಾಯುತ್ತಿದ್ದರು. ಆಗ ಸ್ಕೂಟರ್‌ನಲ್ಲಿ ಬಂದ ಈತ ಯುವತಿಯನ್ನು ಕಂಡು ಅಸಭ್ಯವಾಗಿ ಮಾತನಾಡಿ ಲೈಂಗಿಕವಾಗಿ ನಿಂದಿಸುತ್ತಾ ನಿನ್ನ ರೇಟ್‌ ಎಷ್ಟು ಎಂದು ಕೇಳಿದ್ದಾನೆ.

ಆಗ ಧೈರ್ಯ ತೆಗೆದುಕೊಂಡ ಯುವತಿ ತಕ್ಷಣವೇ ತನ್ನ ಮೊಬೈಲ್‌ನಲ್ಲಿ ಕಾಮುಕನ ಕೃತ್ಯವನ್ನು ಸೆರೆ ಹಿಡಿದರು. ತನ್ನ ಮುಖ ಹಾಗೂ ವಾಹನದ ನೋಂದಣಿ ಸಂಖ್ಯೆಯನ್ನು ಯುವತಿ ರೆಕಾರ್ಡ್‌ ಮಾಡುತ್ತಿರುವುದನ್ನು ತಿಳಿದು ಅಲ್ಲಿಂದ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದನು. ಇತ್ತ ಯುವತಿ ತಾನು ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಯನ್ನು ಕುರಿತು ಗಂಭೀರ ಪ್ರಶ್ನೆಗಳನ್ನು ಕೇಳಿ ಕಳವಳ ವ್ಯಕ್ತಪಡಿಸಿದರು.

ಈ ವಿಡಿಯೋವನ್ನು ಅವರು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್‌ ಮಾಡಿ ಆರೋಪಿಯನ್ನು ಪತ್ತೆಹಚ್ಚಿ ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಈ ಬಗ್ಗೆ ರಾಮಮೂರ್ತಿನಗರ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು