9:58 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ: 11 ದಲಿತ ಸಂಘಟನೆಗಳಿಂದ 11 ಕಿಮೀ. ಕಾಲ್ನಡಿಗೆ ಜಾಥಾ 

21/09/2021, 09:10

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಡಿಗೋಳ್ ಬಳಿ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ

ಘಟನೆಯನ್ನು ಖಂಡಿಸಿ ಸೋಮವಾರ 11 ದಲಿತ ಸಂಘಟನೆಗಳ ಕಾರ್ಯಕರ್ತರು 11 ಕಿ.ಮೀಟರ್ ಕಾಲ್ನಡಿಗೆ ಜಾಥಾ ನಡೆಸಿದರು.

ಮತ್ತೊಂದು ಬಾರಿ ಯಾವ ಹೆಣ್ಣು ಮಗುವಿನ ಮೇಲೆಯೂ ಈ ರೀತಿಯ ದಬ್ಬಾಳಿಕೆ , ದೌರ್ಜನ್ಯ ನಡೆಯಬಾರದು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ತಾಡಿಗೋಲ್ ಗ್ರಾಮದಿಂದ ಹೊರಟ ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಜಾಥಾ ಹಮ್ಮಿಕೊಂಡರು. ರಸ್ತೆಯುದ್ದಕ್ಕೂ ಜಾಥಾದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಬಂದ ದಲಿತ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿದರು. 

ಕೋಲಾರ ಮದನಪಲ್ಲಿ ರಸ್ತೆ ಮೂಲಕ ಜಾಥ ಸಾಗಿ ಬರುತ್ತಿದ್ದಾಗ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸರು ಹರಸಾಹಸ ಪಡುತ್ತಿದ್ದರು.

 ಶ್ರೀನಿವಾಸಪುರಕ್ಕೆ ಜಾಥಾ ಬರುವೊಳಗಾಗಿ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಜಮಾ ಆದರು. ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯ ತನಕ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಈ ಎರಡು ಸರ್ಕಾರಗಳನ್ನು ಕಿತ್ತೊಗೆಯ ತನಕ ನಮ್ಮ ಮೇಲೆ ದೌರ್ಜನ್ಯಗಳು ನಡೆಯುತ್ತಲೆ ಇರುತ್ತವೆ. ಮುಂದಿನ ದಿನಗಳಲ್ಲಿ ಇದಕ್ಕೆ ಒಂದು ಇತಿಶ್ರೀ ಹಾಡಲೇಬೇಕು ದಲಿತ ಮುಖಂಡರಿಂದ ಕೇಳಿ ಬರುತ್ತಿತ್ತು . ರಸ್ತೆಯುದ್ದಕ್ಕೂ ಕ್ರಾಂತಿಗೀತೆಗಳನ್ನು ಹಾಡುತ್ತಾ ತಮಟೆ ವಾದ್ಯಗಳ ಸದ್ದು ಕೇಳಿ ಬರುತ್ತಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು