9:08 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೋಟೆಕಾರ್ ಬೀರಿ, ಕೊಣಾಜೆ ಬಂಟ್ಸ್ ಭವನದ ಬಳಿ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್ ತಪಾಸಣೆ

28/07/2026, 23:21

ಮಂಗಳೂರು(reporterkarnataka.com): ಕೋಟೆಕಾರ್ ಬೀರಿ ಮತ್ತು ಕೊಣಾಜೆಯ ಬಂಟ್ಸ್ ಭವನದ ಬಳಿ ದಿಢೀರ್ ಮಾದಕದ್ರವ್ಯ (ಡ್ರಗ್ಸ್) ತಪಾಸಣೆ ನಡೆಸಲಾಯಿತು.
ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರ ಉಸ್ತುವಾರಿಯಲ್ಲಿ ಎಸಿಪಿ ಸೌತ್ (ದಕ್ಷಿಣ) ಮತ್ತು ಸೆಂಟ್ರಲ್ (ಮಧ್ಯಮ) ಅಧಿಕಾರಿಗಳು ಈ ಕಾರ್ಯಾಚರಣೆಯನ್ನು ಸಂಯೋಜಿಸಿದರು.
ಈ ಮಾರ್ಗಗಳಲ್ಲಿ ಸಂಚರಿಸುತ್ತಿದ್ದ ಖಾಸಗಿ ಮತ್ತು ಕಾಲೇಜು ಬಸ್‌ಗಳಲ್ಲಿದ್ದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲಾಯಿತು.
ಉಳ್ಳಾಲ ವ್ಯಾಪ್ತಿಯ ಕೋಟೇಕಾರ್ ಬೀರಿ ಬಳಿ ಎಸ್‌ಡಿಎಂ ಕಾಲೇಜು, ನಿಟ್ಟೆ ಕೆ.ಎಸ್. ಹೆಗ್ಡೆ, ಸೆಂಟ್ ಅಲೋಶಿಯಸ್, ಪಿಎ ಕಾಲೇಜು,ಬ್ಯಾರೀಸ್ ಇನ್‌ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಹಾಗೂ ಕೆನರಾ ಕಾಲೇಜಿನ ಒಟ್ಟು 72 ವಿದ್ಯಾರ್ಥಿಗಳನ್ನು ಮಲ್ಟಿ ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಬಳಸಿ ತಪಾಸಣೆ ಮಾಡಲಾಯಿತು. ಇದರಲ್ಲಿ 71 ಫಲಿತಾಂಶಗಳು ನೆಗಟಿವ್ ಬಂದಿದ್ದು, ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಬಂದಿದೆ.
ಕೊಣಾಜೆ ಠಾಣಾ ವ್ಯಾಪ್ತಿಯ ಬಂಟ್ಸ್ ಭವನದ ಬಳಿ ಪಿಎ ಕಾಲೇಜಿನ ಎರಡು ಬಸ್‌ಗಳನ್ನು ತಡೆದು, ಮಲ್ಟಿ ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಬಳಸಿ ಒಟ್ಟು 87 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಲಾಯಿತು. ಇಲ್ಲಿ ಎಲ್ಲ ವಿದ್ಯಾರ್ಥಿಗಳ ಫಲಿತಾಂಶವೂ ನೆಗಟಿವ್ ಬಂದಿದೆ.
ಈ ದಿಢೀರ್ ಡ್ರಗ್ಸ್ ತಪಾಸಣಾ ಕಾರ್ಯಾಚರಣೆಯನ್ನು ಸಂಜೆ 4.30 ರಿಂದ 6.00 ಗಂಟೆಯವರೆಗೆ ನಡೆಸಲಾಯಿತು.
ಕೇವಲ ಒಬ್ಬರಿಗೆ ಮಾತ್ರ ಪಾಸಿಟಿವ್ ಬಂದಿರುವುದು ಆಶಾದಾಯಕ ವಿಚಾರವಾಗಿದೆ. ಮಾದಕದ್ರವ್ಯ ಪಾಸಿಟಿವ್ ಬರುವ ವಿದ್ಯಾರ್ಥಿಗಳ ಶೇಕಡಾವಾರು ಪ್ರಮಾಣ ಕಡಿಮೆಯಾಗುತ್ತಿದೆ, ಆದರೆ ಇನ್ನೂ ಸಾಕಷ್ಟು ಕೆಲಸಗಳು ಆಗಬೇಕಿದೆ.
ಕಾನೂನಾತ್ಮಕ ಪ್ರಕ್ರಿಯೆಗಳ ನಂತರ ಆತನನ್ನು ಕೌನ್ಸೆಲಿಂಗ್‌ಗೆ ಕಳುಹಿಸಲಾಗುತ್ತದೆ. ಈ ಕುರಿತು ಮುಂದಿನ ತನಿಖೆ ಮತ್ತು ಕ್ರಮಗಳನ್ನು ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು