5:02 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆಹಾರ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ: ಸಚಿವ ಖಾದರ್ ಅಮೆರಿಕದ ಪರ್ಡ್ಯೂ ಯೂನಿವರ್ಸಿಟಿಯ ಫುಡ್ ಆ್ಯಂಡ್ ಸೈನ್ಸ್ ವಿಭಾಗಕ್ಕೆ ಭೇಟಿ

30/07/2026, 15:11

ಮಂಗಳೂರು(reporterkarnataka.com): ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿರುವ ವಿಶ್ವಪ್ರಸಿದ್ಧ ಪರ್ಡ್ಯೂ ಯೂನಿವರ್ಸಿಟಿಯ ಫುಡ್ ಆಂಡ್ ಸೈನ್ಸ್ ವಿಭಾಗಕ್ಕೆ ಭೇಟಿ ನೀಡಿ ತಜ್ಞರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಅಸುರಕ್ಷಿತ ಹಾಗೂ ಅಸಮರ್ಪಕ ಆಹಾರ ತಯಾರಿಕೆಯಿಂದ ಉಂಟಾಗುವ ಅನಾರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಸುರಕ್ಷಿತ ಮತ್ತು ಗುಣಮಟ್ಟದ ಆಹಾರ ತಯಾರಿಕೆಗೆ ಅನುಸರಿಸಬೇಕಾದ ವೈಜ್ಞಾನಿಕ ವಿಧಾನಗಳು, ಆಧುನಿಕ ತಂತ್ರಜ್ಞಾನಗಳು ಹಾಗೂ ಕಟ್ಟುನಿಟ್ಟಿನ ಆಹಾರ ಸುರಕ್ಷತಾ ಮಾನದಂಡಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

ಈ ಭೇಟಿಯು ಕರ್ನಾಟಕದ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆಹಾರ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಉತ್ತಮ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಮಹತ್ವದ ಹೆಜ್ಜೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು