8:31 PM Friday31 - July 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಕಾವೇರಿ ನೀರು ಹಂಚಿಕೆ ವಿವಾದ: ಆಗಸ್ಟ್ 13 ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ

31/07/2026, 20:23

ಬೆಂಗಳೂರು(reporterkarnataka.com): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ಮುಗಿಲುಮುಟ್ಟಿದ್ದು, ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬೃಹತ್ ಹೋರಾಟಕ್ಕೆ ಕರೆ ನೀಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರ ಸಭೆ ನಡೆದಿದೆ. ಈ ಸಭೆಯಲ್ಲಿ ಕಾವೇರಿ ಜಲವಿವಾದದ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಆಗಸ್ಟ್ 13ರಂದು ‘ಕರ್ನಾಟಕ ಬಂದ್’ ನಡೆಸಲು ಅಧಿಕೃತವಾಗಿ ನಿರ್ಧಾರ ಕೈಗೊಳ್ಳಲಾಗಿದೆ.
ಈಗಾಗಲೇ ಕಾವೇರಿ ಹೋರಾಟದ ಕಾವು ಇಡೀ ರಾಜ್ಯಾದ್ಯಂತ ವ್ಯಾಪಿಸಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೀದಿಗಿಳಿದು ಧರಣಿ ನಡೆಸುತ್ತಿವೆ. ಒಂದೆಡೆ ಮಂಡ್ಯದ ಕೆಆರ್‌ಎಸ್ (KRS) ಜಲಾಶಯದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪ್ರಮುಖ ಪ್ರತಿಪಕ್ಷ ನಾಯಕರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ರೈತರು ಮತ್ತು ಸಾರ್ವಜನಿಕರು ಕಾವೇರಿ ನೀರು ತಮಿಳುನಾಡಿಗೆ ಹರಿಯುವುದನ್ನು ತಕ್ಷಣವೇ ತಡೆಯಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ, ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಸಭೆಯು ಕಾವೇರಿ ಹೋರಾಟಕ್ಕೆ ಮತ್ತಷ್ಟು ಕಾವು ನೀಡಿದೆ. ಆಗಸ್ಟ್ 13 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಎಲ್ಲಾ ವ್ಯಾಪಾರಸ್ಥರು, ಸಾರಿಗೆ ಸಂಸ್ಥೆಗಳು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಸಂಪೂರ್ಣ ಬೆಂಬಲ ನೀಡಬೇಕೆಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಕಾವೇರಿ ಕಾವಲು ಪಡೆ ಮತ್ತು ಕನ್ನಡಪರ ಒಕ್ಕೂಟಗಳು ಮುಂಬರುವ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು