9:51 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Mangalore | ಪಾದುವ ಪಿಯು ಕಾಲೇಜಿನಲ್ಲಿ ‘ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ’ ಕಾರ್ಯಕ್ರಮ

01/08/2026, 10:39

ಮಂಗಳೂರು(reporterkarnataka.com): ನಗರದ ನಂತೂರು ಪಾದುವ ಪದವಿಪೂರ್ವ ಕಾಲೇಜಿನ ಕಲಾ ಸಂಘದ ವತಿಯಿಂದ ‘ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ’ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಶನ್ ವಿನ್ಸಿ ಸಂತ್‌ಮಯೋರ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ
ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಕರ್ನಲ್ ಎನ್. ಶರತ್ ಭಂಡಾರಿ, ಕಾರ್ಗಿಲ್ ಯುದ್ಧದ ಹಿನ್ನೆಲೆ, ಭಾರತೀಯ ಯೋಧರ ಶೌರ್ಯ, ದೇಶಭಕ್ತಿ ಹಾಗೂ ದೇಶರಕ್ಷಣೆಗಾಗಿ ಅವರು ಸಲ್ಲಿಸಿದ ಅಮೋಘ ತ್ಯಾಗಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರೇರಣಾದಾಯಕವಾಗಿ ಮಾತನಾಡಿದರು.
ಕಾರ್ಯಕ್ರಮದ ಸಂಯೋಜಕರಾಗ ಕಾವೇರಿ ಟಿ. ಬಿ. ಹಾಗೂ ವಿಜಯಲಕ್ಷ್ಮಿ ಕಾರ್ಯನಿರ್ವಹಿಸಿದರು. ತನುಶ್ರೀ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ಜೆನಿಷಾ ಮರಿಯಾ ಲೋಬೋ ವಂದನಾರ್ಪಣೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು