7:43 PM Sunday10 - August 2025
ಬ್ರೇಕಿಂಗ್ ನ್ಯೂಸ್
Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಮೊವಾಡಿ: ಸ್ನೇಹಿತರ ಜತೆ ಈಜುತ್ತಿದ್ದ ವೇಳೆ ನೀರು ಪಾಲಾದ ಯುವಕನ ಮೃತದೇಹ 2 ದಿನಗಳ ಬಳಿಕ ಪತ್ತೆ

21/09/2021, 18:20

ಕುಂದಾಪುರ(reporterkarnataka.com):  ಮೊವಾಡಿ‌ ಸೇತುವೆ ಬಳಿ‌ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿ ಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. 

ತ್ರಾಸಿ  ಹೋಲಿಕ್ರಾಸ್  ಮಹೇಂದ್ರ (24) ನೀರುಪಾಲಾದ ಯುವಕ. ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದ. ಅದೇ ಸಂದರ್ಭದಲ್ಲಿ  ನೀರಿನ ಸೆಳೆತ ಹೆಚ್ಚಾಗುತಿತ್ತು. ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ. ನೀರುಪಾಲಾದ ಯುವಕನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳಿಯರು ಹುಡುಕಾಟ ನಡೆಸಿದ್ದರು. ಸತತ ಎರಡೂ ದಿನಗಳಿಂದಲೂ ನೀರುಪಾಲಾದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು