8:12 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

*ಬಂಟ್ವಾಳ | ಬಸ್‌ನಲ್ಲಿ ಅಶ್ಲೀಲ ವರ್ತನೆ, ಗುಪ್ತಾಂಗ ಪ್ರದರ್ಶನ ಆರೋಪ; ಪ್ರಕರಣ ದಾಖಲು*

02/08/2026, 12:15

ಬಂಟ್ವಾಳ(reporterkarnataka.com): ಬಿ.ಸಿ.ರೋಡ್‌ನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣದ ವೇಳೆ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿ ಅಶ್ಲೀಲ ವರ್ತನೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಸ್ ನಲ್ಲಿ ಸುಮಾರು 60ರಿಂದ 70 ವರ್ಷದೊಳಗಿನ ವ್ಯಕ್ತಿಯೊಬ್ಬರು ಬಿ.ಸಿ. ರೋಡ್ ನಲ್ಲಿ ಬಸ್ ಹತ್ತಿ ಚಾಲಕರ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತು ಬಳಿಕ ಮೆಲ್ಕಾರ್ ಜಂಕ್ಷನ್‌ನಲ್ಲಿ ಇಳಿದಿದ್ದರು. ಈ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಚಾಲಕರ ಬಳಿ ಬಂದು, ವ್ಯಕ್ತಿಯು ಪ್ರಯಾಣಿಕರಿಗೆ ಕಾಣುವ ರೀತಿಯಲ್ಲಿ ತನ್ನ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿದ್ದಾನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು