1:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಯಡಕುಮರಿ-ಶಿರಿಬಾಗಿಲು ರೈಲು ಹಳಿಯ ಮೇಲೆ ಭಾರಿ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಅಸ್ತವ್ಯಸ್ತ

02/08/2026, 13:02

ಸಕಲೇಶಪುರ(reporterkarnataka.com):ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರು ರೈಲ್ವೆ ವಿಭಾಗದ ಯಡಕುಮರಿ-ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಅರೆಬೆಟ್ಟದ ಸಮೀಪ ಶನಿವಾರ ರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ.
ಈ ಪರಿಣಾಮ ರೈಲು ಹಳಿಯ ಮೇಲೆ ಅಪಾರ ಪ್ರಮಾಣದ ಮಣ್ಣು ಹಾಗೂ ಬೃಹತ್ ಬಂಡೆಗಳು ಕುಸಿದುಬಿದ್ದು, ಬೆಂಗಳೂರು-ಮಂಗಳೂರು ಹಾಗೂ ಕರಾವಳಿ ಭಾಗವನ್ನು ಸಂಪರ್ಕಿಸುವ ಪ್ರಮುಖ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.


ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ನೈಋತ್ಯ ರೈಲ್ವೆ 7 ಪ್ರಮುಖ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಿದ್ದು, ಕೆಲ ರೈಲುಗಳನ್ನು ಮಧ್ಯಂತರ ನಿಲ್ದಾಣಗಳಲ್ಲೇ ಸ್ಥಗಿತಗೊಳಿಸಿದೆ. ಇದರಿಂದಾಗಿ ನೂರಾರು ಪ್ರಯಾಣಿಕರು ವಿವಿಧ ನಿಲ್ದಾಣಗಳಲ್ಲಿ ಸಿಲುಕಿ ತೀವ್ರ ಪರದಾಡುವಂತಾಗಿದೆ.

*ಭಾಗಶಃ ರದ್ದಾದ ರೈಲುಗಳ ವಿವರ*

16585 ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್: ಹಾಸನದಲ್ಲೇ ಪ್ರಯಾಣ ಅಂತ್ಯ; ಹಾಸನ-ಮುರುಡೇಶ್ವರ ನಡುವೆ ಸಂಚಾರ ರದ್ದು.

16511 KSR ಬೆಂಗಳೂರು-ಕೊಝಿಕೋಡ್ ಎಕ್ಸ್‌ಪ್ರೆಸ್: ಹಾಸನದಲ್ಲೇ ಸ್ಥಗಿತ; ಹಾಸನ-ಕೊಝಿಕೋಡ್ ನಡುವೆ ಸೇವೆ ರದ್ದು. 17377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್: ಹಾಸನದಲ್ಲೇ ಕೊನೆ; ಹಾಸನ-ಮಂಗಳೂರು ನಡುವೆ ಸಂಚಾರ ಇರುವುದಿಲ್ಲ.

16595 KSR ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್: ಸಕಲೇಶಪುರದಲ್ಲೇ ಕೊನೆಗೊಳ್ಳಲಿದ್ದು, ಸಕಲೇಶಪುರ-ಕಾರವಾರ ನಡುವಿನ ಸೇವೆ ಸ್ಥಗಿತಗೊಳ್ಳಲಿದೆ.

ಹಿಂತಿರುಗುವ ರೈಲುಗಳ ಸಂಚಾರದಲ್ಲೂ ಬದಲಾವಣೆ

16586 ಮುರುಡೇಶ್ವರ-SMVT ಬೆಂಗಳೂರು ಎಕ್ಸ್‌ಪ್ರೆಸ್: ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಲ್ಲೇ ಪ್ರಯಾಣ ಅಂತ್ಯಗೊಳ್ಳಲಿದೆ.

16512 ಕೊಝಿಕೋಡ್-KSR ಬೆಂಗಳೂರು ಎಕ್ಸ್‌ಪ್ರೆಸ್: ಕಬಕ ಪುತ್ತೂರಿನವರೆಗೆ ಮಾತ್ರ ಸಂಚಾರ ನಡೆಸಲಿದ್ದು, ಅಲ್ಲಿಂದ ಬೆಂಗಳೂರಿನವರೆಗಿನ ಸೇವೆ ರದ್ದಾಗಿದೆ. 17378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್‌ಪ್ರೆಸ್: ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಲ್ಲೇ ಸ್ಥಗಿತಗೊಳ್ಳಲಿದೆ.

*ಕಾರ್ಯಾಚರಣೆಗೆ ಮಳೆ ಅಡ್ಡಿ*
ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಹಳಿಯ ಮೇಲಿರುವ ಮಣ್ಣು ಹಾಗೂ ಬಂಡೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಅಡಚಣೆಯಾಗಿದೆ. ರೈಲ್ವೆ ಸಿಬ್ಬಂದಿ ಯಂತ್ರೋಪಕರಣಗಳ ನೆರವಿನಿಂದ ತೆರವು ಕಾರ್ಯದಲ್ಲಿ ನಿರತರಾಗಿದ್ದಾರೆ. ಪ್ರಯಾಣಿಕರು ಹೊರಡುವ ಮುನ್ನ ರೈಲುಗಳ ಸಂಚಾರ ಸ್ಥಿತಿಯನ್ನು ಪರಿಶೀಲಿಸಿ ಪ್ರಯಾಣ ಬೆಳೆಸುವಂತೆ ನೈಋತ್ಯ ರೈಲ್ವೆ ಕೋರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು