1:44 PM Tuesday4 - August 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಆರಂಭ: ತಾತ್ಕಾಲಿಕ ವೇಗ ನಿರ್ಬಂಧ

04/08/2026, 13:29

ಸಕಲೇಶಪುರ (reporterkarnataka.com): ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ – ಸಿರಿಬಾಗಿಲು ನಡುವೆ ರೈಲು ಮಾರ್ಗಕ್ಕೆ ಮಣ್ಣು ಕುಸಿತ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಸೋಮವಾರ ರಾತ್ರಿ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ.ದುರಸ್ತಿ ಕಾರ್ಯಾಚರಣೆ ಬಳಿಕ ರೈಲು ಮಾರ್ಗವನ್ನು ಸೋಮವಾರ ರಾತ್ರಿ ಸಂಚಾರಕ್ಕೆ ಸೂಕ್ತವಾಗಿದೆ ಎಂದು ಪ್ರಮಾಣೀಕರಿಸಲಾಯಿತು. ಘಟನಾ ಸ್ಥಳದಲ್ಲಿ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗಂಟೆಗೆ 10 ಕಿ.ಮೀ. ತಾತ್ಕಾಲಿಕ ವೇಗದ ನಿರ್ಬಂಧ ಜಾರಿಯಲ್ಲಿದೆ.
ರೈಲು ಸಂಚಾರದ ಸಾಮಾನ್ಯ ವೇಳಾಪಟ್ಟಿಗಳನ್ನು ಹಂತಹಂತವಾಗಿ ಮರು ಹೊಂದಿಸಲಾಗುತ್ತದೆ, ಕೆಲ ವಿಳಂಬಗಳು ಮುಂದುವರಿದು ಬಳಿಕ ಎಂದಿನಂತೆ ರೈಲು ಸೇವೆ ಮುಂದುವರಿಯಲಿದೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.

*ಪರೀಕ್ಷಾರ್ಥ ಎಂಜಿನ್ ಚಾಲನೆ:*
ದುರಸ್ತಿ ಕಾರ್ಯಾಚರಣೆ ಸ್ಥಳಕ್ಕೆ ಡಿಆರ್‌ಎಂ ಮುದಿತ್ ಮಿತ್ತಲ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿ ನಿರ್ದೇಶನಗಳನ್ನು ನೀಡಿದರು. ಕಾರ್ಯಾಚರಣೆ ಪೂರ್ಣವಾದ ಬಳಿಕ ಪರೀಕ್ಷಾರ್ಥ ಎಂಜಿನ್ ಓಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು