11:53 PM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮೈಸೂರು | ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ‘ವರ್ಧಂತಿ ಉತ್ಸವ’: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ

04/08/2026, 13:38

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ‘ವರ್ಧಂತಿ ಉತ್ಸವ’ವು ಇಂದು ಚಾಮುಂಡಿ ಬೆಟ್ಟದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಧಾರ್ಮಿಕ ಶ್ರದ್ಧಾ-ಭಕ್ತಿಯಿಂದ ಜರುಗುತ್ತಿದೆ.

ಮಹೋತ್ಸವದ ಹಿನ್ನೆಲೆಯಲ್ಲಿ ಮುಂಜಾನೆ 3.30 ರಿಂದಲೇ ಧಾರ್ಮಿಕ ವಿಧಿ-ವಿಧಾನಗಳು ಆರಂಭಗೊಂಡಿದ್ದು, ದೇವಿಗೆ ಅಭ್ಯಂಜನ ಸ್ನಾನ, ರುದ್ರಾಭಿಷೇಕ ಹಾಗೂ ಮಹಾನ್ಯಾಸ ಪೂಜೆಗಳನ್ನು ನೆರವೇರಿಸಿ, ಅಪರೂಪದ ರಾಜಮುಡಿ ಹಾಗೂ ರತ್ನಖಚಿತ ಚಿನ್ನಾಭರಣಗಳಿಂದ ದಿವ್ಯಾಲಂಕಾರಗೊಳಿಸಿ ಮಹಾಮಂಗಳಾರತಿ ಮಾಡಲಾಯಿತು.ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳ ಅನುಕೂಲಕ್ಕಾಗಿ ಲಲಿತಮಹಲ್ ಅರಮನೆ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯ, ಸುಲಭ ದರ್ಶನ ವ್ಯವಸ್ಥೆ, ಅನ್ನಪ್ರಸಾದ ವಿನಿಯೋಗ ಹಾಗೂ ನಗರ ಪೊಲೀಸರಿಂದ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.ದೇವಿಯ ಮೂರ್ತಿಗೆ ಬೆಟ್ಟದಲ್ಲಿರುವ ದೇವಿ ಕೆರೆಯಿಂದ ತಂದ ಶುದ್ದ ಜಲದಿಂದ ಅಭಿಷೇಕ ಮಾಡಿ, ನಂತರ ತಾಯಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಬಳಿಕ ವಿವಿಧ ಹೂವುಗಳಿಂದ ಅಲಂಕಾರ ಮಾಡಿ, ಕುಂಕುಮಾರ್ಚನೆ, ಸಹಸ್ರನಾಮಾರ್ಚನೆ ನೆರವೇರಿಸಲಾಗಿದೆ.ಮಹಾ ಮಂಗಳಾರತಿ ಬಳಿಕ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಇರಿಸಿ, ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ವರ್ಧಂತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೆಚ್ಚು ಭಕ್ತರು ಆಗಮಿಸಿದ್ದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು