9:33 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪೆಟ್ರೋಲ್ ಗೆ ಎಥೆನಾಲ್ (E20) ಮಿಶ್ರಣ | ಪ್ರಧಾನಿ ಭೇಟಿಗೆ ಬಂದ ಮಾಜಿ ಸಿಎಂ ಕೇಜ್ರಿವಾಲ್‌ಗೆ ದೆಹಲಿ ಪೊಲೀಸರ ತಡೆ

04/08/2026, 20:08

ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸುಮಾರು 100 ಜನರೊಂದಿಗೆ ಮೆರವಣಿಗೆ ಹೊರಟಿದ್ದ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಂಗಳವಾರ ದೆಹಲಿ ಪೊಲೀಸರು ತಡೆದರು.
ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಮಾತನಾಡಿದ ಅವರ, ನಾವು ಭಯೋತ್ಪಾದಕರಲ್ಲ. ಪೆಟ್ರೋಲ್ ಗೆ ಎಥೆನಾಲ್ (E20) ಮಿಶ್ರಣದಿಂದ ಉಂಟಾಗುವ ಸಮಸ್ಯೆಗೆ ಸಂಬಂಧಿಸಿದಂತೆ ಅವರನ್ನು ಭೇಟಿ ಮಾಡಲು ಬಂದಿದ್ದೇವೆ ಎಂದು ಅವರಿಗೆ ತಿಳಿಸಿ ಎಂದು ಹೇಳಿದರು.
ಎಥೆನಾಲ್ ಮಿಶ್ರಣದ ಪೆಟ್ರೋಲ್ ವಿರುದ್ಧ ಲಕ್ಷಾಂತರ ಅರ್ಜಿಗಳನ್ನು ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅವಕಾಶ ಕೋರಿ ಕಳುಹಿಸಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಹೀಗಾಗಿ ಅರ್ಜಿಗಳನ್ನು ವೈಯಕ್ತಿಕವಾಗಿ ಅವರಿಗೆ ಹಸ್ತಾಂತರಿಸಲು ಬಂದಿರುವುದಾಗಿ ಹೇಳಿದ ಅರವಿಂದ್ ಕೇಜ್ರಿವಾಲ್, ಇ 20 ಇಂಧನ ಸಮಸ್ಯೆಗೆ ಸಂಬಂಧಿಸಿದಂತೆ ನಾವು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಬಯಸುತ್ತೇವೆ. ದಯವಿಟ್ಟು ಅವರಿಗೆ ತಿಳಿಸಿ ಎಂದು ಪೊಲೀಸರಲ್ಲಿ ಮನವಿ ಮಾಡಿದರು.
ಆಪ್ ದೆಹಲಿ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ಮಾತನಾಡಿ, ಕೇಜ್ರಿವಾಲ್ ಅವರು ಲಕ್ಷಾಂತರ ಅರ್ಜಿಗಳೊಂದಿಗೆ ಬಂದಿದ್ದಾರೆ. ಅವರು ಪ್ರಧಾನಿಯವರೊಂದಿಗೆ ಎಥೆನಾಲ್ ಕುರಿತು ಚರ್ಚೆ ಮಾಡಲು ಬಯಸುತ್ತಾರೆ. ಈ ಬಗ್ಗೆ ನಾವು ಪತ್ರಿಕಾಗೋಷ್ಠಿಗಳಲ್ಲಿ ಪ್ರಧಾನಿಗೆ ಪದೇ ಪದೇ ಹೇಳಿದ್ದೇವೆ ಎಂದರು. ಪ್ರಧಾನಿ ನಿವಾಸದ ಬಳಿ ಇತ್ತೀಚೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಕೋರಿ ಪ್ರತಿಭಟನೆ ನಡೆಸಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ಕೆಲವು ಗಂಟೆಗಳ ಕಾಲ ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು