8:32 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

Mangaluru | ಪೇಸ್‌ನಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಕುರಿತು ಎಫ್‌ಡಿಪಿ ಉದ್ಘಾಟನೆ

05/08/2026, 10:26

ಮಂಗಳೂರು(reporterkarnataka.com): ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ (ಪೇಸ್), ಮಂಗಳೂರಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ‘ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್ಸ್: ಪ್ರೆಸೆಂಟ್ & ಫ್ಯೂಚರ್’ ವಿಷಯದ ಕುರಿತು ಆಯೋಜಿಸಿರುವ ಒಂದು ವಾರದ AICTE ATAL Academy ಪ್ರಾಯೋಜಿತ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (ಎಫ್‌ಡಿಪಿ) ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವು ಆಗಸ್ಟ್ 3ರಿಂದ 8ರವರೆಗೆ ನಡೆಯಲಿದೆ.
ಬೆಂಗಳೂರು ಬಿ.ಎಂ.ಎಸ್. ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ್ ಟಿ. ಲಮಾಣಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಲೆಕ್ಟ್ರಿಕ್ ವಾಹನ (ಇವಿ) ಕ್ಷೇತ್ರವು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ವ್ಯವಸ್ಥೆಗಳ ಮಹತ್ವ ಹೆಚ್ಚುತ್ತಿದೆ. ಬ್ಯಾಟರಿಯ ಸುರಕ್ಷತೆ, ಕಾರ್ಯಕ್ಷಮತೆ ಮತ್ತು ಬಾಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಥರ್ಮಲ್ ಮ್ಯಾನೇಜ್‌ಮೆಂಟ್ ತಂತ್ರಜ್ಞಾನಗಳ ಅಭಿವೃದ್ಧಿ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಗೌರವ ಅತಿಥಿಯಾಗಿದ್ದ ಪೇಸ್‌ನ ವಿದ್ಯಾರ್ಥಿ ವ್ಯವಹಾರಗಳ ಡೀನ್ ಹಾಗೂ CMSR ನಿರ್ದೇಶಕ ಡಾ. ಸಯ್ಯದ್ ಅಮೀನ್ ಅಹಮ್ಮದ್ ಮಾತನಾಡಿ, ಇವಿ ಉದ್ಯಮ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯಮಗಳ ನಡುವಿನ ಸಹಯೋಗವನ್ನು ಬಲಪಡಿಸಬೇಕಾಗಿದೆ ಎಂದರು. ಉದ್ಯಮದ ನೈಜ ಅಗತ್ಯಗಳಿಗೆ ಪೂರಕವಾದ ನವೀನ ಮತ್ತು ಪ್ರಾಯೋಗಿಕ ಸಂಶೋಧನೆಗಳಿಗೆ ಅಧ್ಯಾಪಕರು ಹಾಗೂ ಸಂಶೋಧಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಪೇಸ್ ಉಪ ಪ್ರಾಂಶುಪಾಲೆ ಡಾ. ಶರ್ಮಿಳಾ ಕುಮಾರಿ ಎಂ. ಮಾತನಾಡಿ, ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಅಧ್ಯಾಪಕರ ಜ್ಞಾನ ಮತ್ತು ಕೌಶಲ ವೃದ್ಧಿಗೆ AICTE ATAL Academyಯ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪೇಸ್ ಪ್ರಾಂಶುಪಾಲ ಡಾ. ರಾಮಿಸ್ ಎಂ.ಕೆ. ಮಾತನಾಡಿ, ಆಧುನಿಕ ಬ್ಯಾಟರಿ ಚಾಲಿತ ವ್ಯವಸ್ಥೆಗಳ ಸುರಕ್ಷತೆ, ದಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸುವಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ವ್ಯವಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ವಿವಿಧ ಶಿಕ್ಷಣ ಸಂಸ್ಥೆಗಳ ಸುಮಾರು 50 ಮಂದಿ ಎಫ್‌ಡಿಪಿಯಲ್ಲಿ ಭಾಗವಹಿಸಿದ್ದಾರೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಪೈ ಎಂ. ಸ್ವಾಗತಿಸಿದರು. ಎಫ್‌ಡಿಪಿ ಸಂಯೋಜಕ ಡಾ. ಅಬ್ದುಲ್ ರಝಾಕ್ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಡಾ. ಮಹಮ್ಮದ್ ಸಲ್ಮಾನ್ ವಾರಿಮಣಿ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಶಹಬಾಝ್ ಎಸ್.ಎಂ. ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು