ಇತ್ತೀಚಿನ ಸುದ್ದಿ
ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ
08/08/2026, 13:20
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.
ಸಚಿವರು ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ.

ಬರ ವೀಕ್ಷಣೆಗೆ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರದೇಶದಲ್ಲಿ ಕೆ.ಜೆ.ಜಾರ್ಜ್ ಅವರು ಪ್ರವಾಸದಲ್ಲಿದ್ದರು.
ಅಮೃತ್ ಮಹಲ್ ಸಂವರ್ಧನ ತಳಿ ಕೇಂದ್ರದ ಗೇಟಿಗೆ ಪೊಲೀಸ್ ಜೀಪ್ ಡಿಕ್ಕಿಯೊಡೆದಿದೆ. ಯಾರಿಗೂ ಯಾವುದೇ ಅನಾಹುತವಾಗಿಲ್ಲ, ಗಾಡಿಯ ಮುಂಭಾಗ ಡ್ಯಾಮೇಜ್ ಆಗಿದೆ.ಸಚಿವರ ಕಾರಿನ ಮುಂಭಾಗವಿದ್ದ ಪೊಲೀಸ್ ಜೀಪ್ ಇದಾಗಿದೆ.
ಗಾಡಿ ನಿಯಂತ್ರಣಕ್ಕೆ ಸಿಗದೇ ಅಮೃತ್ ಮಹಲ್ ತಳಿ ಕೇಂದ್ರದ ಗೇಟಿಗೆ ಡಿಕ್ಕಿ ಹೊಡೆದಿದೆ.
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.













