1:42 PM Saturday8 - August 2026
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಇತ್ತೀಚಿನ ಸುದ್ದಿ

ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಚದುರಂಗ ಪಂದ್ಯಾಟ ಉದ್ಘಾಟನೆ

08/08/2026, 13:25

ಮಂಗಳೂರು (reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ಬೋಳಾರಿನ ಸಂತ ಆನ್ಸ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 2026- 27 ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಚದುರಂಗ ಪಂದ್ಯಾಟದ ಉದ್ಘಾಟನಾ ಸಮಾರಂಭವು ಸಂತ ಆನ್ಸ್ ಪ್ರೌಢಶಾಲೆಯ ಸಭಾಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಸಂತ ಆನ್ಸ್ ಸಮೂಹ ವಿದ್ಯಾ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾದ ಭಗಿನಿ ಮಾರಿ ಇವ್ಲಿನ್ ಎ.ಸಿ. ವಹಿಸಿದ್ದರು. ಮಂಗಳೂರು ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಜೀವನ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಬಳಿಕ ವೇದಿಕೆಯಲ್ಲಿದ್ದ ಗಣ್ಯರು ದೀಪ ಪ್ರಜ್ವಲನೆ ಮಾಡುವ ಮೂಲಕ ಚದುರಂಗ ಪಂದ್ಯಾಟವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳು ಚದುರಂಗ ಆಟವನ್ನು ಸಾಂಕೇತಿಕ ವಾಗಿ ಆಡಿ. ಪಂದ್ಯಾಟಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ತಾಲ್ಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ನಿತಿನ್ ಆರ್. ಪುತ್ರನ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಹರೀಶ್ ರೈ, ಗ್ರೇಡ್–1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೆಲುವಮ್ಮ, ಸಂತ ಆನ್ಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಭಗಿನಿ ಅನೆಟ್ ಎ.ಸಿ, ಸಂತ ಅನ್ನರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ರೋಸ್ಮಿಟ ಎ.ಸಿ., ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕಾಸಿಂ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ವೀಣಾ ಲೋಬೋ ಅವರು ನಿರೂಪಿಸಿದರು. ಮುಖ್ಯ ಶಿಕ್ಷಕಿ ಭಗಿನಿ ಅನೆಟ್ ಎ. ಸಿ . ಯವರು ಸ್ವಾಗತಿಸಿದರು. ಶಿಕ್ಷಕಿ ಸಾರ ನತಾಶಾ ವಂದನಾರ್ಪಣೆ ಸಲ್ಲಿಸಿದರು.
ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು