1:09 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವಿರಾಜಪೇಟೆ | ಕಣ್ಣಂಗಾಲ ಗ್ರಾಮದಲ್ಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಮೃತನ ಕುಟುಂಬಕ್ಕೆ ಪರಿಹಾರ ವಿತರಣೆ

10/08/2026, 19:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲೂಕು ಅಮ್ಮತ್ತಿ ಸಮೀಪದ ಕಣ್ಣಂಗಾಲ ಗ್ರಾಮ ಪಂಚಾಯತಿಯ ಯಡೂರು‌ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದ ಕಾರ್ಮಿಕ ಅಣ್ಣಪ್ಪನ ಕುಟುಂಬಕ್ಕೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ತೆರಳಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಇದೇ ಸಂದರ್ಭದಲ್ಲಿ, ದುರ್ದೈವಿಯ ಕುಟುಂಬಕ್ಕೆ ಸರ್ಕಾರ ನೀಡುವ ಪರಿಹಾರ ಮಟ್ಟದ ಮೊದಲ ಭಾಗವಾಗಿ ₹5 ಲಕ್ಷದ ಚೆಕ್ ವಿತರಿಸಿದರು.


ಘಟನೆ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಬಳಿಕ ಅರಣ್ಯ ಕಂಟ್ರೋಲ್ ರೂಂಗೆ ಭೇಟಿ ನೀಡಿದ ಮಾನ್ಯ ಶಾಸಕರು, ಅಲ್ಲಿಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ DFO ಹಾಗೂ ಇತರ ಅಧಿಕಾರಿಗಳಿಗೆ 24*7 ಪರಿಸ್ಥಿತಿಯನ್ನು ಗಮನಿಸುವಂತೆಯೂ ಹಾಗೂ ರೇಡಿಯೋ ಕಾಲರ್ ಅಳವಡಿಸಿದ ಕಾಡುಪ್ರಾಣಿಗಳ ಪ್ರತಿ ಚಲನವಲನಗಳನ್ನು ಗಮನಿಸುತ್ತಾ, ಸಾರ್ವಜನಿಕರಿಗೆ ಮಾಹಿತಿ ನೀಡಿ ಜಾಗ್ರಿತರಿರುವಂತೆ ಸೂಚಿಸುತ್ತಿರಬೇಕೆಂದು ಖಡಕ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಣ್ಣಂಗಾಲ ವಲಯ ಅಧ್ಯಕ್ಷರಾದ ಮಚ್ಚಾರಂಡ ಕಿರಣ್,ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು