ಇತ್ತೀಚಿನ ಸುದ್ದಿ
Kodagu | ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
10/08/2026, 21:36
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್ ಪಲ್ಟಿ ಆಗಿದ್ದು, 22ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ನಡೆದಿದೆ.







ಮಲ್ಲಳ್ಳಿ ಜಲಪಾತಕ್ಕೆ ತೆರಳುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಕೆಲವು ಪ್ರಯಾಣಿಕರನ್ನು ತಕ್ಷಣವೇ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












