8:10 PM Tuesday11 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ ಗುತ್ತಿಗೆದಾರ ಸ್ಥಳದಲ್ಲೆ ಸಾವು

11/08/2026, 18:04

ಸುರತ್ಕಲ್(reporterkarnataka.com): ಅಪಾರ್ಟ್‌ಮೆಂಟ್ ಮೇಲ್ಭಾಗದಲ್ಲಿ ಶೀಟ್ ಅಳವಡಿಸುವ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಗುತ್ತಿಗೆದಾರರೊಬ್ಬರು ಮೃತಪಟ್ಟಿರುವ ಘಟನೆ ಸುರತ್ಕಲ್‌ನ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ನಡೆದಿದೆ.

ಮೃತರನ್ನು ಭಾಸ್ಕರ್ ಜಿ. ಕರ್ಕೇರ (65) ಎಂದು ಗುರುತಿಸಲಾಗಿದೆ. ಕೃಷ್ಣಾಪುರ 6ನೇ ಬ್ಲಾಕ್‌ನ ಪ್ಲಾಝ ಅಪಾರ್ಟ್‌ಮೆಂಟ್‌ನ ಮೇಲ್ಭಾಗದಲ್ಲಿ ಶೀಟ್ ಅಳವಡಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಭಾಸ್ಕರ್ ಅವರಿಗೆ ತಗುಲಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಚಿಕಿತ್ಸೆಗಾಗಿ ಕರೆದೊಯ್ಯುವ ಪ್ರಯತ್ನ ನಡೆಸಿದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಭಾಸ್ಕರ್ ಅವರು ಕಟ್ಟಡ ಕಾಮಗಾರಿಯ ಗುತ್ತಿಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಪಾರ್ಟ್‌ಮೆಂಟ್ ಮೇಲ್ಭಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗುತ್ತಿದ್ದರೂ ಕಾಮಗಾರಿ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಲಕರಣೆಗಳನ್ನು ಒದಗಿಸಿರಲಿಲ್ಲ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ.

ಘಟನೆಯ ಕುರಿತು ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣ ಹಾಗೂ ಸುರಕ್ಷತಾ ಕ್ರಮಗಳ ಕೊರತೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಕಾಮಗಾರಿ ವೇಳೆ ವಿದ್ಯುತ್ ಸಂಪರ್ಕದ ಅಪಾಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ಎತ್ತಿ ತೋರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು