3:32 AM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ

13/08/2026, 22:20

ಬೆಂಗಳೂರು(reporterkarnataka.com): ಬಿಡದಿ ಜಾಗದ ವಿಚಾರವಾಗಿ ಜೆಡಿಎಸ್‌ ಮತ್ತು ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ವ್ಯಂಗ್ಯವಾಡಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ‘ನಟ ಸಾರ್ವಭೌಮ’, ‘ನಾಟಕರತ್ನ’ ಎಂದು ಕರೆದಿರುವ ಅವರು, ಬಿಡದಿಯಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ನಾಟಕಕ್ಕೆ ಹೋಲಿಕೆ ಮಾಡಿದ್ದಾರೆ.ಬಿಡದಿಯ 35 ಎಕರೆ ಜಾಗದ ವಿಚಾರ ಮುಂದಿಟ್ಟುಕೊಂಡು ಮಾತನಾಡಿದ ಪ್ರದೀಪ್‌ ಈಶ್ವರ್‌, ನಾಳೆಯಿಂದ ಸದನದಲ್ಲಿ ಈ ವಿಚಾರ ಚರ್ಚೆಗೆ ಬರಲಿದೆ. ಜೆಡಿಎಸ್‌ ನಾಯಕರು ವಿಷಯವನ್ನು ಪ್ರಸ್ತಾಪಿಸಲಿರುವ ಹಿನ್ನೆಲೆಯಲ್ಲಿ ಅದನ್ನು ನಾಟಕದ ರೂಪದಲ್ಲಿ ವ್ಯಂಗ್ಯವಾಗಿ ವಿವರಿಸಿದ್ದಾರೆ.
‘ನಾಳೆಯಿಂದ ಬಿಡದಿ ನಾಟಕ ಆರಂಭವಾಗಲಿದೆ. ನಾಟಕದ ಮುಖ್ಯ ಪಾತ್ರಧಾರಿ ಎಚ್‌.ಡಿ. ಕುಮಾರಸ್ವಾಮಿ. ಶಕುನಿ ಪಾತ್ರವನ್ನು ಆರ್‌. ಅಶೋಕ್‌ ನಿರ್ವಹಿಸಲಿದ್ದಾರೆ. ದುಶ್ಯಾಸನ ಪಾತ್ರಕ್ಕೆ ಎಂಎಲ್‌ಸಿ ರವಿಕುಮಾರ್‌ ಅಥವಾ ಛಲವಾದಿ ನಾರಾಯಣಸ್ವಾಮಿ ಬರಲಿದ್ದಾರೆ’ ಎಂದು ಪ್ರದೀಪ್‌ ಈಶ್ವರ್‌ ಲೇವಡಿ ಮಾಡಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದ 35 ಎಕರೆ ಜಾಗದಲ್ಲೇ ಈ ‘ನಾಟಕ’ ನಡೆಯಲಿದೆ ಎಂದು ಹೇಳಿದ ಅವರು, ಬಿಡದಿ ವಿಚಾರವನ್ನು ರೋಚಕ ನಾಟಕದ ರೀತಿಯಲ್ಲಿ ಜನರ ಮುಂದೆ ಪ್ರಸ್ತುತಪಡಿಸಿದ್ದಾರೆ.
ಕುಮಾರಸ್ವಾಮಿ ಅವರ ಗಡಿಯಾರವನ್ನೂ ಪ್ರಸ್ತಾಪಿಸಿರುವ ಪ್ರದೀಪ್‌ ಈಶ್ವರ್‌, ‘ಸಮಯ ನನ್ನ ವಾಚ್‌ನಲ್ಲಿ 75 ಲಕ್ಷ ರೂಪಾಯಿ, ಕುಮಾರಣ್ಣನ ಸಿಂಪಲ್‌ ವಾಚ್‌ನಲ್ಲಿ ಸರಿಯಾಗಿ ತೋರಿಸುತ್ತದೆ’ ಎಂದು ವ್ಯಂಗ್ಯವಾಡಿದ್ದಾರೆ. ನಾಟಕದ ಸಮಯವನ್ನು ಕುಮಾರಸ್ವಾಮಿ ಅವರೇ ನಿಗದಿ ಮಾಡಲಿ ಎಂದೂ ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು