4:13 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ; 3 ಮಂದಿ ಬಂಧನ

14/08/2026, 16:13

ಬಂಟ್ವಾಳ(reporterkarnataka.com): ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾವಳಪಡೂರು ಎಂಬಲ್ಲಿ ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸ್ವತ್ತುಗಳು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳೂರು ಹೊರವಲಯದ ನಾಶೀರ್ ಹುಸೇನ್ (37),ಬಂಟ್ವಾಳ ತಾಲೂಕಿ ಗೋಳ್ತಮಜಲಿನ ಮಹಮ್ಮದ್ ಜುನೈದ್ (38) ಹಾಗೂ ಮಂಗಳೂರು ಕಂಕನಾಡಿಯ ಮೊಹಮ್ಮದ್ ಅಫ್ರೀದಿ (24) ಎಂದು ಗುರುತಿಸಲಾಗಿದೆ.
ಆಗಸ್ಟ್ 12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ಅವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57 ಗ್ರಾಂ ನಿಷೇಧಿತ ಎಂಡಿಎಂಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್‌ ಗಳು ಸೇರಿದಂತೆ ಒಟ್ಟು 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ: 112/2026, ಕಲಂ: 8(C) ಜೊತೆಗೆ 22(ಸಿ) NARCOTIC DRUGS & PSYCHOTROPIC SUBSTANCES ACT, 1985 Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ ಕೆ.ವಿ, ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ರನ್ನ ಗೌಡ ಎಸ್‌ ಪಾಟೀಲ್, ಹಾಗೂ ಪ್ರೊ. ಪಿಎಸ್‌ಐ ಗಳಾದ ಶಿವರಾಮ್‌, ಫಕೀರಪ್ಪ ಮತ್ತು ಸಿಬ್ಬಂದಿಯವರಾದ ಉದಯ ರೈ, ರಾಧಾಕೃಷ್ಣ ಕೆ , ಪ್ರವೀಣ್‌ ರೈ, ಪ್ರಶಾಂತ್, ಲೋಕೇಶ್‌, ವಿವೇಕ್ ರೈ, ಕುಮಾರ್, ಬಸವರಾಜ್‌, ಶ್ರೀಧರ್‌, ಧನ್ಯಶ್ರೀ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು