ಇತ್ತೀಚಿನ ಸುದ್ದಿ
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್ ಅಹಮದ್ ಪತ್ರ
14/08/2026, 22:01
ಬೆಂಗಳೂರು(reporterkarnataka.com): ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ತಮಗೆ ನೀಡಲಾಗಿರುವ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.ಜಮೀರ್ ಅವರು ಬರೆದಿರುವ ಪತ್ರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
*ಜಮೀರ್ ಅವರು ಬರೆದ ಪತ್ರದಲ್ಲಿ ಏನಿದೆ?*
ನನ್ನನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ನೀಡಿರುವುದು ಸರಿಯಷ್ಟೇ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜಿಬಿಎ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇರುತ್ತದೆ. ಆದುದರಿಂದ ನನಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ತಮ್ಮಲ್ಲಿ ಕೋರಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.












