ಇತ್ತೀಚಿನ ಸುದ್ದಿ
ಸ್ವಾತಂತ್ರ ದಿನಾಚರಣೆಯ ದಿನವೇ ಸ್ಫೋಟಕ್ಕೆ ಸಂಚು: ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ
16/08/2026, 13:15
ಬೆಂಗಳೂರು(reporterkarnataka.com): ಬೆಂಗಳೂರಲ್ಲಿ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ ಆಸ್ಫುಲ್ಲ ಮಲ್ಲಿಕ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಲ್ಲಿ ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಉಗ್ರ ಸಂಘಟನೆಯ ಜೊತೆಗೆ ದಾಳಿಗೆ ಸಂಚು ರೂಪಿಸಿದ್ದ ಮಲ್ಲಿಕ್ ತೆಹ್ರಿಕ್ ಎ ತಾಲಿಬಾನ್ ಪಾಕಿಸ್ತಾನ (TTE) ಸಂಘಟನೆ ಜೊತೆಗೆ ಈತ ನಂಟು ಹೊಂದಿದ್ದ ಎನ್ನಲಾಗಿದೆ. ಜಿಗಣಿಯಲ್ಲಿ ವಾಸವಿದ್ದ ಶಂಕಿತ ಉಗ್ರ ಆಸ್ಫುಲ್ಲ ಮಲ್ಲಿಕ್, ಡಿಸಿಪಿ ನಾರಾಯಣ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಿದ್ದಾರೆ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ಮಾಡಿಕೊಂಡಿದ್ದ ಮುಸ್ಲಿಮರ ಮೇಲೆ ದೌರ್ಜನ್ಯ ಈಸಾಗುವ ಕಡೆಗೆ ದಾಳಿ ಮಾಡಲು ಸಂಚು ರೂಪಿಸಿದ್ದ ಪಾಕಿಸ್ತಾನ ಭಾರತ ಸೇರಿದಂತೆ ಕೆಲ ದೇಶಗಳು ಅಲ್ಲಿ ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ ಸೇನೆ ಮೇಲೆ ದಾಳಿ ಮಾಡಲು ಕೂಡ ಈತ ಸಂಚು ರೂಪಿಸಿದ ಎನ್ನಲಾಗಿದೆ.












