6:57 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

16/08/2026, 21:39

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು ಶಾಖೆಯಲ್ಲಿ ಇಂದು 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ನಿವೃತ್ತ NCC ಅಧಿಕಾರಿ ಕ್ಯಾಪ್ಟನ್ ಮಹೇಶ್ ರೈ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸಿದರು. ಯುವಜನತೆ ದೇಶದ ಜವಾಬ್ದಾರಿಯುತ ನಾಗರಿಕರಾಗಿ ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಅವರು ಸಂಸ್ಥೆಯ ಸಿಬ್ಬಂದಿ ವರ್ಗದವರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು ಹಾಗೂ ಅಶ್ವಿನಿ ಕೃಷ್ಣ ಮುಳಿಯ ಅವರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಅವರು, ಸ್ವಾತಂತ್ರ್ಯಾನಂತರ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಅಭಿವೃದ್ಧಿಯ ಪಯಣವನ್ನು ಸ್ಮರಿಸಿದರು. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕರಾದ ರಾಘವೇಂದ್ರ ಪಟೇಲ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು. ಕಾರ್ಯಕ್ರಮದ ಅಂಗವಾಗಿ ಸಿಬ್ಬಂದಿಗೆ ಸಿಹಿ ಹಂಚುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು