7:28 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

18/08/2026, 18:07

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ವಾತಂತ್ರ್ಯೋತ್ಸವವನ್ನು ಬೆಳಗ್ಗಿನ ಬಲಿ ಪೂಜೆಯ ಬಳಿಕ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಐ ಸಿ ವೈ ಎಂ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷರಾಗಿ ಇತ್ತೀಚೆಗೆ ಚುನಾಯಿತರಾದ ರಾಯನ್ ಮಾರ್ಸೆಲ್ ನೊರೊನ್ಹಾ ಅವರು ದಿನದ ಮಹತ್ವವನ್ನು ವಿವರಿಸಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಜಿಲ್ಲೆಯ ಕ್ರೈಸ್ತರ ಪಾತ್ರವನ್ನು ಉದಾಹರಣೆ ಸಹಿತ ವಿವರಿಸಿದರು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ, ಸಹಾಯಕ ಧರ್ಮ ಗುರು ವಂದನೀಯ ಫಾ.ಜೋಸೆಫ್ ಕುವೆಲ್ಲೊ,ಶಿವಮೊಗ್ಗ ಧರ್ಮ ಪ್ರಾಂತ್ಯದ ಧರ್ಮ ಗುರು ವಂದನೀಯ ಫಾ. ರೋಶನ್ ಡಿ ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ, ಸಿ. ಮೊಂತಿ, ಸಿ. ವಿನುತಾ, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು