ಇತ್ತೀಚಿನ ಸುದ್ದಿ
ಅಳಿಕೆ ಟು ಪುತ್ತೂರು ಬಸ್ ಪಯಣ | ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
19/08/2026, 11:45
ವಿಟ್ಲ(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡಿದ ಆರೋಪದಡಿ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆ.15ರಂದು ಬಾಲಕ ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ವಿಟ್ಲದಲ್ಲಿ ಬಸ್ ಹತ್ತಿದ ಆರೋಪಿ ಆತನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಬಾಲಕನ ಮನೆಗೂ ತೆರಳಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರು ದಾಖಲಾಗಿದೆ.
ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.












