11:07 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

19/08/2026, 18:50

ವಿಜಯನಗರ(reporterkarnataka.com): ಇಲ್ಲಿನ ತಂಬ್ರಹಳ್ಳಿ ಸಮೀಪದ ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದ ಒಂದೇ ಕುಟುಂಬದ ಮೂವರು ಸಹೋದರರು ನೀರುಪಾಲಾಗಿರುವ ದುರಂತ ಘಟನೆ ನಡೆದಿದೆ.
ತಂಬ್ರಹಳ್ಳಿ ಗ್ರಾಮದ ನಿವಾಸಿಗಳಾದ ಅಜ್ಜಪ್ಪ (30), ಯಮನೂರಪ್ಪ (26) ಮತ್ತು ರಾಜು (24) ನೀರುಪಾಲಾದ ದುರ್ದೈವಿಗಳು. ಇವರಲ್ಲಿ ಯಮನೂರಪ್ಪ ಎಂಬುವವರ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಸಹೋದರರಾದ ಈ ಮೂವರು ಯುವಕರು ಎಂದಿನಂತೆ ಮಂಗಳವಾರ ಮಧ್ಯಾಹ್ನ ತುಂಗಭದ್ರಾ ನದಿಯ ಹಿನ್ನೀರಿನ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದರು. ಈ ವೇಳೆ ಬೀಸಿದ ಭಾರಿ ಗಾಳಿಯ ರಭಸಕ್ಕೆ ತೆಪ್ಪ ಮಗುಚಿ ಬಿದ್ದಿದ್ದು, ಮೂವರೂ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ರಾತ್ರಿಯಾದರೂ ಯುವಕರು ಮನೆಗೆ ಮರಳದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ತಂಬ್ರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಜತೆಗೂಡಿ ಹಿನ್ನೀರಿನಲ್ಲಿ ತೀವ್ರ ಶೋಧ ಕಾರ್ಯ ಕೈಗೊಳ್ಳಲಾಯಿತು. ಬುಧವಾರ ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಯಮನೂರಪ್ಪನ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರು ಯುವಕರ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು