8:12 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತುಂಬೆ | ಕೈಕೊಟ್ಟ ರಾಮಲ್ ಕಟ್ಟೆ ಪಂಪ್ ಹೌಸ್ ಟ್ರಾನ್ಸ್ ಫಾರ್ಮರ್: ಮಂಗಳೂರಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ

19/08/2026, 20:12

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಂಡ್ ಡ್ಯಾಮ್ ಗೆ ಸಂಬಂಧಪಟ್ಟ ಟ್ರಾನ್ಸ್ ಫಾರ್ಮರ್ ಕೆಟ್ಟು ಹೋಗಿದ್ದು, ನೀರು ಸರಬರಾಜಿನಲ್ಲಿ ತೊಂದರೆ ಉಂಟಾಗಿದೆ.
ತುಂಬೆ ರಾಮಲ್ ಕಟ್ಟೆಯಲ್ಲಿರುವ ಪಂಪ್ ಹೌಸ್ ಗೆ ಸಂಬಂಧಿಸಿದ 11 ಕೆವಿ ಸಾಮರ್ಥ್ಯದ ಟ್ರಾನ್ಸ್ ಫಾರ್ಮರ್ ಕಳೆದ ರಾತ್ರಿ ಕೆಟ್ಟು ಹೋಗಿತ್ತು. ಇದರ ಪರಿಣಾಮ ನೀರು ಸರಬರಾಜಿನಲ್ಲಿ ಕೊಂಚ ಪ್ರಮಾಣದ ವ್ಯತ್ಯಯ ಉಂಟಾಗಿ ಮಂಗಳೂರಿನ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಕರಾವಳಿಯಲ್ಲಿ ಮತ್ತೆ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ವಿದ್ಯುತ್ ಕೇಬಲ್ ನಲ್ಲಿ ದೋಷ ಕಂಡು ಬಂದು ಟ್ರಾನ್ಸ್ ಫಾರ್ಮರ್ ಕೆಟ್ಟು ಹೋಗಿತ್ರು.
ಕಳೆದ ರಾತ್ರಿ ಟ್ರಾನ್ಸ್ ಫಾರ್ಮರ್ ಕೈಕೊಟ್ಟಿರುವುದರಿಂದ ರಾಮಲ್ ಕಟ್ಟೆಯಲ್ಲಿರುವ ಪಂಪ್ ಹೌಸ್ ನ ಗ್ರೌಂಡ್ ಟ್ಯಾಂಕ್ ನಲ್ಲಿ ಸಂಗ್ರಹಿಸಲ್ಪಟ್ಟ ನೀರು ಸರಬರಾಜಿಗೆ ತೊಂದರೆ ಉಂಟಾಗಿತ್ತು. ಇದರಿಂದ ಮಂಗಳೂರಿನ ಹೃದಯಭಾಗವಾದ ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್, ಪಾಂಡೇಶ್ವರ ಪರಿಸರದಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಆದರೆ, ಇಂದು(ಬುಧವಾರ) ಟ್ರಾನ್ಸ್ ಫಾರ್ಮರ್ ದುರಸ್ತಿ ಕಾರ್ಯ ನಡೆದಿದ್ದು, ಮತ್ತೆ ನೀರು ಸರಬರಾಜು ಪುನಾರಂಭಗೊಂಡಿದೆ ಎಂದು ಮಂಗಳೂರು ಮಹಾನಗರಪಾಲಿಕೆ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು